ಬೆಂಗಳೂರು: ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರನ್ನು ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ದಾಖಲಾದ ಪೋಕ್ಸೋ ಕೇಸ್ ನಲ್ಲಿ ಬಂಧಿಸಲಾಗಿದೆ. ಈ ಕಾರಣದಿಂದಾಗಿ ಅವರನ್ನು ಅನಾಥಸೇವಾಶ್ರಮದ ವಿಶ್ವಸ್ಥ ಸಮಿತಿಯ ಸದಸ್ಯತ್ವದಿಂದ ವಜಾಗೊಳಿಸಲಾಗಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಮಲ್ಲಾಡಿಹಳ್ಳಿಯ ಅನಾಥಸೇವಾಶ್ರಮ ವಿಶ್ವಸ್ತ ಸಮಿತಿಯ ಗೌರವ ಕಾರ್ಯದರ್ಶಿ ಪ್ರೊ.ಕೆ.ಇ ರಾಧಾಕೃಷ್ಣ ಅವರು,
ಕ್ರಿಮಿನಲ್ ಆಪಾದನೆಯನ್ನು ಎದುರಿಸುತ್ತಿರುವ ಶ್ರೀ ಶಿವಮೂರ್ತಿ ಮುರುಘಾಶರಣರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅನಾಥಸೇವಾಶ್ರಮದ ಅಧ್ಯಕ್ಷ ಹಾಗೂ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಎಲ್ಲಾ ಸ್ಥಾನದಿಂದ ವಿಮುಕ್ತಿಗೊಳಿಸಲಾಗಿದೆ ಎಂದಿದ್ದಾರೆ.