spot_img
spot_img
spot_img
18.7 C
Belagavi
Monday, September 26, 2022
spot_img

ವಿಕಲಚೇತನರ ದ್ವಿಚಕ್ರ ವಾಹನಕ್ಕಾಗಿ ಅರ್ಜಿ ಆಹ್ವಾನ

spot_img
spot_img

For Breaking News Download App

ಬೆಳಗಾವಿ: 2021-22ನೇ ಸಾಲಿನ ವಿಕಲಚೇತನರ ಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆಯಡಿ ಬೆಳಗಾವಿ ಜಿಲ್ಲೆಯ ದೈಹಿಕ ವಿಕಲಚೇತನರಿಂದ ಮರು ಅರ್ಜಿ ಆಹ್ವಾನಿಸಲಾಗಿದೆ.

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಡಿ, 20 ರಿಂದ 60 ವರ್ಷ ವಯೋಮಿತಿಯಲ್ಲಿರುವ ತೀವ್ರತರ ದೈಹಿಕ ಅಂಗವಿಕಲರಿಗೆ ವಿತರಿಸಲಾಗುತ್ತಿರುವ ಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆಯಡಿ ದೈಹಿಕ ವಿಕಲಚೇತನರ ಹಿತದೃಷ್ಟಿಯಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಹ ದೈಹಿಕ ವಿಕಲಚೇತನರು (ಶೇಕಡಾ 75 ಅಥವಾ 75ಕ್ಕಿಂತ ಹೆಚ್ಚಿನ ಅಂಗವಿಕಲತೆ ಹೊಂದಿರುವ ) ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ಫೆಬ್ರುವರಿ 23ರ ಒಳಗಾಗಿ ತಮ್ಮ ತಾಲೂಕು ಪಂಚಾಯತಿ ಕಛೇರಿಯಲ್ಲಿರುವ ಎಂ.ಆರ್.ಡಬ್ಯೂ. ಇವರಿಗೆ ದ್ವಿ ಪ್ರತಿಯಲ್ಲಿ ಅರ್ಜಿ ಸಲ್ಲಿಸಬೇಕು.

ಅರ್ಜಿ ನಮೂನೆ ಮತ್ತು ದಾಖಲಾತಿಗಳ ವಿವರಗಳಿಗಾಗಿ ಈ ಕಛೇರಿ ದೂರವಾಣಿ ಸಂಖ್ಯೆ:0831-2476096/7 ಗೆ ಅಥವಾ ತಮ್ಮ ತಾಲೂಕಿನ ಎಂ.ಆರ್.ಡಬ್ಲೂ್ಯ. ಇವರನ್ನು ಸಂಪರ್ಕಿಸಬಹುದಾಗಿದೆ.

For Breaking News Download App

Related News

ನನಗೆ ಭಾಷೆ – ಜಾತಿ ಇಲ್ಲ, ಜನರ ಪ್ರೀತಿ ಒಂದೇ : ಶಾಸಕಿ ಅಂಜಲಿ ನಿಂಬಾಳ್ಕರ್ 

ವರದಿ : ರತ್ನಾಕರ ಗೌಂಡಿ  ಬೆಳಗಾವಿ : ಖಾನಾಪುರ್ ಪಟ್ಟಣದಲ್ಲಿ ಅಂಜಲಿ ನಿಂಬಾಳ್ಕರ್ ನೇತೃತ್ವದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹಾಗೂ ಮಹಾರಾಷ್ಟ್ರ ಏಕೀಕರಣ ಸಮಿತಿಯ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ 60...

ಬೆಳಗಾವಿ : ಭೀಕರ ಅಪಘಾತದಲ್ಲಿ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವು 

ಬೆಳಗಾವಿ: ಕಾರು ಮತ್ತು ಬೈಕ್​ಗೆ, ಲಾರಿ ಡಿಕ್ಕಿ ಹೊಡೆದ ಪರಿಣಾಮ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಬೂದಿಗೊಪ್ಪ ಕ್ರಾಸ್​ನಲ್ಲಿ ನಡೆದಿದೆ. ರುಕ್ಮಿಣಿ ಹಳಕಿ(48) ಅಕ್ಷತಾ ಹಳಕಿ(22), ಕಾರು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -