spot_img
spot_img
spot_img
18.7 C
Belagavi
Monday, September 26, 2022
spot_img

ವಿದ್ಯುತ್ ಮಗ್ಗ, ಹುಕ್ಸ್ ಜಕಾರ್ಡ್ ವಿತರಣೆಗೆ ಅರ್ಜಿ ಆಹ್ವಾನ

spot_img
spot_img

For Breaking News Download App

ಬೆಳಗಾವಿ: ಉಪ ನಿರ್ದೇಶಕರ ಕಚೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ಬೆಳಗಾವಿ ಈ ಕಚೇರಿಯಿಂದ 2022-23ನೇ ಸಾಲಿಗೆ ನೇಕಾರರ ವಿಶೇಷ ಪ್ಯಾಕೇಜ್ ಯೋಜನೆಯಡಿ 02 ವಿದ್ಯುತ್ ಮಗ್ಗದೊಂದಿಗೆ 400 ಹುಕ್ಸ್‍ಗಳ ಜಕಾರ್ಡ್ ಅಥವಾ 40 ಕೋಲಿನ ಡಾಬಿ ಖರೀದಿಗೆ ರೂ 3.50 ಲಕ್ಷಗಳ ಘಟಕ ವೆಚ್ಚಕ್ಕೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಠ ವರ್ಗಕ್ಕೆ ಸೇರಿದ ಫಲಾನುಭವಿಗಳಿಗಾಗಿ ಶೇ 90 ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿರುತ್ತದೆ.

ವಿದ್ಯುತ್ ಮಗ್ಗ ನೇಕಾರಿಕೆಯಲ್ಲಿ ತರಬೇತಿ ಹಾಗೂ ಅನುಭವ ಹೊಂದಿದ ಅರ್ಹ ಫಲಾನುಭವಿಗಳು ಈ ಕಛೇರಿಗೆ ಭೇಟಿ ನೀಡಿ ಅರ್ಜಿಗಳನ್ನು ಪಡೆದು ಸದರಿ ಅರ್ಜಿಯೊಂದಿಗೆ ಯೋಜನೆಯ ಮಾರ್ಗಸೂಚಿಯನ್ವಯ ದಾಖಲಾತಿಗಳನ್ನು ಲಗತ್ತಿಸಿ ಈ ಕಚೇರಿಗೆ 30 ಸೆಪ್ಟೆಂಬರ್ 2022 ರೊಳಗಾಗಿ ಸಲ್ಲಿಸುವುದು.

ತದ ನಂತರ ಈ ಕಚೇರಿಯಿಂದ ಅರ್ಹ ಪಲಾನುಭವಿಗಳನ್ನ ಆಯ್ಕೆ ಮಾಡಿ ಸಾಲ ಮಂಜೂರಾತಿಗೆ ಸಂಬಂದಪಟ್ಟ ಬ್ಯಾಂಕುಗಳಿಗೆ ಶಿಫಾರಸ್ಸು ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಈ ಕಚೇರಿ ದೂರವಾಣಿ ಸಂಖ್ಯೆ: 0831-2950674 ಗೆ ಸಂಪರ್ಕಿಸಬಹುದು ಎಂದು ಕೈಮಗ್ಗ ಮತ್ತು ಜವಳಿ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Breaking News Download App

Related News

ನನಗೆ ಭಾಷೆ – ಜಾತಿ ಇಲ್ಲ, ಜನರ ಪ್ರೀತಿ ಒಂದೇ : ಶಾಸಕಿ ಅಂಜಲಿ ನಿಂಬಾಳ್ಕರ್ 

ವರದಿ : ರತ್ನಾಕರ ಗೌಂಡಿ  ಬೆಳಗಾವಿ : ಖಾನಾಪುರ್ ಪಟ್ಟಣದಲ್ಲಿ ಅಂಜಲಿ ನಿಂಬಾಳ್ಕರ್ ನೇತೃತ್ವದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹಾಗೂ ಮಹಾರಾಷ್ಟ್ರ ಏಕೀಕರಣ ಸಮಿತಿಯ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ 60...

ಬೆಳಗಾವಿ : ಭೀಕರ ಅಪಘಾತದಲ್ಲಿ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವು 

ಬೆಳಗಾವಿ: ಕಾರು ಮತ್ತು ಬೈಕ್​ಗೆ, ಲಾರಿ ಡಿಕ್ಕಿ ಹೊಡೆದ ಪರಿಣಾಮ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಬೂದಿಗೊಪ್ಪ ಕ್ರಾಸ್​ನಲ್ಲಿ ನಡೆದಿದೆ. ರುಕ್ಮಿಣಿ ಹಳಕಿ(48) ಅಕ್ಷತಾ ಹಳಕಿ(22), ಕಾರು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -