spot_img
spot_img
spot_img
18.7 C
Belagavi
Monday, September 26, 2022
spot_img

ಉಚಿತ ಕೌಶಲ್ಯ ಆಧಾರಿತ ತರಬೇತಿಗೆ ಅರ್ಜಿ ಆಹ್ವಾನ

spot_img
spot_img

For Breaking News Download App

ಬೆಳಗಾವಿ : ಕೆನರಾ ಬ್ಯಾಂಕ್ ದೇಶಪಾಂಡೆ ಆರ್ ಸೆಟ್ ಸಂಸ್ಥೆ, ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ತರಬೇತಿ ಸಂಸ್ಥೆಯಲ್ಲಿ 18 ರಿಂದ 45 ವಯಸ್ಸಿನ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ/ಯುವತಿಯರಿಗಾಗಿ 30 ದಿನಗಳ ಮೊಬೈಲ್ ಪೋನ್ ದುರಸ್ಥಿ ಮತ್ತು ಕೃಷಿಯ ಜೊತೆಗೆ 10 ದಿನಗಳ ಲಾಭದಾಯಕ ತರಕಾರಿ ಬೆಳೆ ಹಾಗೂ ನರ್ಸರಿ ಮಾಡುವುದರ ಬಗ್ಗೆ ಸಪ್ಟೆಂಬರ್ ತಿಂಗಳಿನಲ್ಲಿ ಯಚಿತ ತರಬೇತಿ ನೀಡಲಾಗಿದ್ದು, ಸಪ್ಟೆಂಬರ್ 05 ರೊಳಗಾಗಿ ತಮ್ಮ ಹೆಸರು, ವಿಳಾಸಗಳನ್ನು ನೊಂದಾಯಿಸಿ ಅರ್ಜಿ ಆಹ್ವಾನಿಸಲಾಗಿದೆ.

ತರಬೇತಿಯು ಸ್ವ-ಉದ್ಯೋಗ ಪ್ರಾರಂಭಿಸಿ, ಸ್ವಾವಲಂಬಿ ಜೀವನ ನಡೆಸಲು ಅನುಕೂಲವಾಗಲಿದ್ದು, ತರಬೇತಿ ಊಟ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿರುತ್ತದೆ. ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುವುದು.

ತರಬೇತಿಯಲ್ಲಿ ಕೌಶಲ್ಯ, ಸಾಫ್ಟ್ ಸ್ಕೀಲ್ಸ್, ಯೋಗ ತರಬೇತಿ ಹಾಗೂ ಬ್ಯಾಂಕಿಂಗ್, ಸರಕಾರಿ ಯೋಜನೆಗಳು ಮತ್ತು ಯೋಜನಾ ವರದಿ ತಯಾರಿಕೆ ಬಗೆಗಿನ ಮಾಹಿತಿಯನ್ನು ಉಚಿತವಾಗಿ ನೀಡಲಾಗುವುದು.

ತರಬೇತಿಯಲ್ಲಿ ಭಾಗವಹಿಸಲು ಆಸಕ್ತರು ಕೆನರಾ ಬ್ಯಾಂಕ್ ದೇಶಪಾಂಡೆ ಆರ್ ಸೆಟ್ ಸಂಸ್ಥೆ, ಹಳಿಯಾಳ, ಉತ್ತರ ಕನ್ನಡ ಜಿಲ್ಲೆ ಈ ವಿಳಾಸಕ್ಕೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ದೂರವಾಣ ಸಂಖ್ಯೆ 9482188780, 9483485489, 8197022501, 9742438790, 08284-295307, 220807 ಕ್ಕೆ ಸಂಪರ್ಕಿಸಬಹುದು ಎಂದು ಕೆನರಾ ಬ್ಯಾಂಕ್ ದೇಶಪಾಂಡೆ ಆರ್ ಸೆಟ್ ಸಂಸ್ಥೆಯ ನಿರ್ದೇಶಕರಾದ ಪ್ರಸನ್ನಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Breaking News Download App

Related News

ನನಗೆ ಭಾಷೆ – ಜಾತಿ ಇಲ್ಲ, ಜನರ ಪ್ರೀತಿ ಒಂದೇ : ಶಾಸಕಿ ಅಂಜಲಿ ನಿಂಬಾಳ್ಕರ್ 

ವರದಿ : ರತ್ನಾಕರ ಗೌಂಡಿ  ಬೆಳಗಾವಿ : ಖಾನಾಪುರ್ ಪಟ್ಟಣದಲ್ಲಿ ಅಂಜಲಿ ನಿಂಬಾಳ್ಕರ್ ನೇತೃತ್ವದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹಾಗೂ ಮಹಾರಾಷ್ಟ್ರ ಏಕೀಕರಣ ಸಮಿತಿಯ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ 60...

ಬೆಳಗಾವಿ : ಭೀಕರ ಅಪಘಾತದಲ್ಲಿ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವು 

ಬೆಳಗಾವಿ: ಕಾರು ಮತ್ತು ಬೈಕ್​ಗೆ, ಲಾರಿ ಡಿಕ್ಕಿ ಹೊಡೆದ ಪರಿಣಾಮ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಬೂದಿಗೊಪ್ಪ ಕ್ರಾಸ್​ನಲ್ಲಿ ನಡೆದಿದೆ. ರುಕ್ಮಿಣಿ ಹಳಕಿ(48) ಅಕ್ಷತಾ ಹಳಕಿ(22), ಕಾರು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -