ಬೆಳಗಾವಿ : 2022-23ನೇ ಸಾಲಿನ ಬೆಳಗಾವಿ ಜಿಲ್ಲೆಯ ಪರಿಶಿಷ್ಟ ಪಂಗಡದ ಕಾನೂನು ಪದವಿಧರರಿಗೆ ಆಡಳಿತ ನ್ಯಾಯಾಧಿಕರಣದಲ್ಲಿ ತರಬೇತಿ ನೀಡುವ ಕುರಿತು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಬೆಳಗಾವಿ ಜಿಲ್ಲೆಗೆ ಸಂಬಂಧಿಸಿದ ಹಾಗೂ ವಕೀಲ ವೃತ್ತಿ ನಡೆಸಲು ಅರ್ಹತೆಯುಳ್ಳ ಕಾನೂನು ಪದವೀಧರರು ಮಾತ್ರ ಈ ತರಬೇತಿಗೆ ಅರ್ಹರಿರುತ್ತಾರೆ. ತರಬೇತಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವದು, ಮಹಿಳಾ ಅಭ್ಯರ್ಥಿಗಳಿಗೆ ಆಧ್ಯತೆ ನೀಡಲಾಗುವದು.
ಅರ್ಜಿಗಳನ್ನು ಸ್ವೀಕರಿಸುವ ಕೊನೆಯ ದಿನಾಂಕದಂದು ಅಭ್ಯರ್ಥಿಯ ವಯಸ್ಸು 40 ವರ್ಷಗಳನ್ನು ಮೀರಿರಬಾರದು ಈ ಕುರಿತು ಅಧಿಕೃತ ಪ್ರಮಾಣ ಪತ್ರವನ್ನು ಲಗತ್ತಿಸಬೇಕು.
ಆಯ್ಕೆಯಾದ ಅಭ್ಯರ್ಥಿಗಳಿಗೆ ಎರಡು ವರ್ಷಗಳವರೆಗೆ ಪ್ರತಿ ಮಾಹೆ 10,000.00 ತರಬೇತಿ ಭತ್ಯೆ ನೀಡಲಾಗುವುದು. ತರಬೇತಿಯನ್ನು ಮಧ್ಯದಲ್ಲಿ ಬಿಟ್ಟು ಹೋಗಬಾರದು ಕೇಂದ್ರ ಹಾಗೂ ರಾಜ್ಯ ಸರ್ಕಾರದಲ್ಲಿ ಉದ್ಯೋಗ ದೊರೆತಲ್ಲಿ ಈ ನಿಬಂಧನೆ ಅನ್ವಯವಾಗುವದಿಲ್ಲ.
ಆಯ್ಕೆಯಾದ ಅಭ್ಯರ್ಥಿಗಳನ್ನು ಜಿಲ್ಲಾ ಪಬ್ಲಿಕ್ ಪ್ರಾಸಿಕ್ಯೂಟರ್ ಸರ್ಕಾರಿ ವಕೀಲರು ಅಥವಾ 20 ವರ್ಷಗಳಿಗಿಂತ ಕಡಿಮೆ ಇಲ್ಲದ ವಕೀಲ ವೃತ್ತಿಯಲ್ಲಿ ಅನುಭವವಿರುವ ಖಾಸಗಿ ಹಿರಿಯ ವಕೀಲರಲ್ಲಿ ತರಬೇತಿ ಪಡೆಯಲು ನಿಯೋಜಿಸಲಾಗುವುದು.
ಆಯ್ಕೆಯಾದ ಅಭ್ಯರ್ಥಿಯು ಸರ್ಕಾರದ ಎಲ್ಲ ನಿಭಂದನೆಗೆ ಬಧ್ಧನಾಗಿರುತ್ತೇನೆ ಎಂದು 20 ರೂ.ಗಳ ಛಾಪಾಕಾಗದದ ಮೇಲೆ ಮುಚ್ಚಳಿಕೆಯನ್ನು ಬರೆದುಕೊಡಬೇಕು.
ಆಯ್ಕೆಯಾದ ಅಭ್ಯರ್ಥಿಯು ಸುಳ್ಳು ಮಾಹಿತಿ ಹಾಗೂ ಪ್ರಮಾಣ ಪತ್ರಗಳನ್ನು ಒದಗಿಸಿದಲ್ಲಿ ಶಿಕ್ಷೆಗೊಳಪಡುವುದಲ್ಲದೆ ಅವನು ಪಡೆದುಕೊಂಡ ತರಬೇತಿ ಭತ್ಯೆಯ ಪೂರ್ತಿ ಹಣವನ್ನು ವಾರ್ಷಿಕ ಶೇ. 10 ರಂತೆ ಬಡ್ಡಿಯೊಂದಿಗೆ ವಸೂಲಿ ಮಾಡಲಾಗುವುದು. ಒಂದು ವೇಳೆ ಬಾಕಿ ವಸೂಲಿ ಉಳಿದಲ್ಲಿ ಭೂಕಂದಾಯ ಬಾಕಿ ನಿಯಮಾವಳಿ ಅನ್ವಯ ವಸೂಲ ಮಾಡಲಾಗುವುದು.
ಅಭ್ಯರ್ಥಿಗಳು ಭರ್ತಿ ಮಾಡಿದ ನಿಗಧಿತ ಅರ್ಜಿಯೊಂದಿಗೆ ಅವಶ್ಯಕ ಮಾಹಿತಿಗಳಾದ ಪದವಿ ಪರೀಕ್ಷೆ ಹಾಗೂ ಪ್ರಥಮ, ದ್ವಿತೀಯ ಮತ್ತುತೃತೀಯ ವರ್ಷದ ಕಾನೂನು ಪರೀಕ್ಷೆಗಳ ದೃಢಿಕೃತ ಅಂಕಪಟ್ಟಿ ಮತ್ತು ತೇರ್ಗಡೆ ಹೊಂದಿದ ಪ್ರಮಾಣ ಪತ್ರ, ಜನ್ಮ ದಿನಾಂಕ ಪ್ರಮಾಣ ಪತ್ರಅಥವಾ ಟಿ. ಸಿ. ಮತ್ತು ಬಾರ್ ಅಸೋಶಿಯೇಶನದಲ್ಲಿ ಸದಸ್ಯತ್ವ ಪಡೆದ ಬಗ್ಗೆ ಪ್ರಮಾಣ ಪತ್ರ ಲಗತ್ತಿಸಬೇಕು.
ಅಭ್ಯರ್ಥಿಗಳು ಅರ್ಜಿಯನ್ನು ಆನ್‍ಲೈನ್ ಮೂಲಕ ದಿನಾಂಕ: ನವಂಬರ್ 2 ರಿಂದ ನವಂಬರ್ 30 ರವರೆಗೆ tw.kar.nic.in ರಲ್ಲಿ ಅರ್ಜಿ ಸಲ್ಲಿಸಬೇಕು. ಭರ್ತಿ ಮಾಡಿದ ಅರ್ಜಿಗಳನ್ನು ಆಯಾ ತಾಲ್ಲೂಕಿನ ಸಹಾಯಕ ನಿರ್ದೇಶಕರು, ಸಮಾಜಕಲ್ಯಾಣ ಇಲಾಖೆ ಹಾಗೂ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಛೇರಿಗಳಿಗೆ ಸಲ್ಲಿಸಬಹುದಾಗಿದೆ ಎಂದು ಬೆಳಗಾವಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.