ಬೆಳಗಾವಿ : ಬೆಳಗಾವಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದೀನ್‍ದಯಾಳ್ ಅಂತ್ಯೋದಯ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಯೋಜನೆಯಡಿ 2022-23 ನೇ ಸಾಲಿನಲ್ಲಿ ಕೌಶಲ್ಯ ತರಬೇತಿ ಮೂಲಕ ಉದ್ಯೋಗ ಮತ್ತು ಸ್ಥಳನಿಯುಕ್ತಿ ಉಪಘಟಕದಡಿ ವಿವಿಧ ಉಚಿತ ತರಬೇತಿಗಳಿಗೆ ಅರ್ಜಿಗಳನ್ನು ಅಹ್ವಾನಿಸಲಾಗಿದೆ.
ಷರತ್ತುಗಳು:
ಬೆಳಗಾವಿ ಮಹಾನಗರ ಪಾಲಿಕೆ ವ್ಯಾಪ್ತಿಯ ರಹವಾಸಿಯಾಗಿರಬೇಕು, ವಾರ್ಷಿಕ ಆದಾಯ ಗರಿಷ್ಠ 1,20,000 ಮಿತಿಗೊಳಪಟ್ಟಿರಬೇಕು.(ಆದಾಯ ಪ್ರಮಾಣಪತ್ರ ಲಗತ್ತಿಸಬೇಕು), ವಯೋಮಿತಿ 16 ರಿಂದ 45 ವರ್ಷದೊಳಗಿನವರಾಗಿರಬೇಕು., ನಿಗದಿಪಡಿಸಿದ ಶೈಕ್ಷಣ ಕ ದಾಖಲಾತಿಗಳಿಗೆ ಪ್ರಮಾಣ ಪತ್ರಗಳನ್ನು ದೃಢೀಕರಿಸಿ ಲಗತ್ತಿಸಬೇಕು.
ಅರ್ಜಿ ನಮೂನೆಗಳಿಗಾಗಿ ಪ್ರಕಟಣೆಯ ದಿನಾಂಕದಿಂದ 01 ವಾರದೊಳಗಾಗಿ ಡೇ-ನಲ್ಮ್ ಕಚೇರಿ, ಯುಪಿಎಸಿ ಶಾಖೆ, ಮಹಾನಗರ ಪಾಲಿಕೆ ಇಲ್ಲಿ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ. ಆಸಕ್ತರು ಅರ್ಜಿ ಸಲ್ಲಿಸಲು ಡಿ.26 ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.