spot_img
spot_img
spot_img
spot_img
spot_img
spot_img
spot_img
spot_img
spot_img
21 C
Belagavi
Wednesday, September 27, 2023
spot_img

ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ನಾಳೆಯಿಂದ ಆರಂಭ

ಬೆಂಗಳೂರು: ಮನೆ ಯಜಮಾನಿಗೆ 2000 ರೂ ನೀಡುವ ಗೃಹಲಕ್ಷ್ಮೀ ಯೋಜನೆ ನಾಳೆಯಿಂದ ಅಂದರೆ ಜೂನ್ 16ರಿಂದ ಆನ್​ಲೈನ್, ಆಫ್​ಲೈನ್​ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಘೋಷಣೆ ಮಾಡಿದ್ದಾರೆ.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಪಿಎಲ್, ಅಂತ್ಯೋದಯ ಕಾರ್ಡ್​ದಾರರು ಗೃಹಲಕ್ಷ್ಮೀ ಯೋಜನೆಗೆ ನಾಳೆಯಿಂದ ಅರ್ಜಿ ಸಲ್ಲಿಸಬಹುದು. ಸೇವಾಸಿಂಧು ಪೋರ್ಟಲ್​, ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್​ ಕೇಂದ್ರಗಳಲ್ಲಿ ಉಚಿತವಾಗಿ ಅರ್ಜಿ ಸಲ್ಲಿಸಬಹುದು. ಮಹಿಳೆ ಆಧಾರ್ ಕಾರ್ಡ್, ಪತಿ ಆಧಾರ್ ಕಾರ್ಡ್​ ಮಾಹಿತಿ ನೀಡಬೇಕು. ಈ ಬಗ್ಗೆ ಯಾವುದೇ ಗೊಂದಲಗಳಿದ್ದರೆ ಸಹಾಯವಾಣಿ ಸಂಖ್ಯೆ 1902ಕ್ಕೆ ಕರೆ ಮಾಡಬಹುದು ಎಂದು ಮಾಹಿತಿ ನೀಡಿದರು. ಅಲ್ಲದೇ ಅರ್ಜಿ ಸಲ್ಲಿಸಲು ಯಾವುದೇ ಕೊನೆಯ ದಿನಾಂಕ ಇರುವುದಿಲ್ಲ. ಅರ್ಜಿ ಸಲ್ಲಿಸಲು ಪ್ರಕ್ರಿಯೆ ವರ್ಷ ಪೂರ್ತಿ ನಿರಂತರವಾಗಿರುತ್ತದೆ ಎಂದು ಸ್ಪಷ್ಟಪಡಿಸಿದರು.

  • ಅರ್ಜಿದಾರರು 16-06-2023 ರಿಂದ ಅರ್ಜಿ ಸಲ್ಲಿಸಬಹುದಾಗಿರುತ್ತದೆ
  • ಅರ್ಜಿಗಳನ್ನು ಆನ್‌ಲೈನ್ ಮೂಲಕ ಅಥವಾ ಭೌತಿಕವಾಗಿ ಗ್ರಾಮ ಒನ್/ಬೆಂಗಳೂರು ಒನ್/ಕರ್ನಾಟಕ ಒನ್ ಕೇಂದ್ರಗಳಲ್ಲಿ ಸೇವಾಸಿಂಧು ಪೋರ್ಟಲ್ ಮೂಲಕ ಸಲ್ಲಿಸಬಹುದಾಗಿದೆ (https://sevasindhugs.karnataka.gov.in/gruhalakshmi)
  •  ಅರ್ಜಿ ಸಲ್ಲಿಕೆಗೆ SMS ಮೂಲಕ ಹಾಗೂ ಸೇವಾಸಿಂಧು ಪೋರ್ಟಲ್ ಮೂಲಕ Auto generated ಸ್ವೀಕೃತಿಗಳನ್ನು ಪಡೆಯಬಹುದಾಗಿದೆ.
  • ಅರ್ಜಿ ಸಲ್ಲಿಸಲು ಅರ್ಜಿದಾರರ ಹಾಗೂ ಪತಿಯ ಆಧಾರ್ ಕಾರ್ಡ್ ಸಂಖ್ಯೆ ಮೊಬೈಲ್ ಸಂಖ್ಯೆ ಹಾಗೂ ಅರ್ಜಿದಾರರ ಬ್ಯಾಂಕ್‌ ಖಾತೆ ವಿವರಗಳು ಅಗತ್ಯವಾಗಿರುತ್ತದೆ.
  • ಅರ್ಜಿ ಸಲ್ಲಿಕೆಗೆ ಯಾವುದೇ ಶುಲ್ಕ ವಿಧಿಸಲಾಗುವುದಿಲ್ಲ, ಸಂಪೂರ್ಣ ಉಚಿತವಾಗಿದ್ದು, ಅರ್ಜಿದಾರರು ಮಧ್ಯವರ್ತಿಗಳ ಮೇಲೆ ಅವಲಂಬಿತರಾಗದೆ ಅರ್ಜಿಯನ್ನು ಸ್ವತ ಮೇಲೆ ತಿಳಿಸಿದ ಕೇಂದ್ರಗಳಲ್ಲಿ ಸಲ್ಲಿಸಬಹುದಾಗಿರುತ್ತದೆ.
  • ಅರ್ಜಿ ಸಲ್ಲಿಕೆಗೆ ಯಾವುದೇ ಕೊನೆಯ ದಿನಾಂಕ ಇರುವುದಿಲ್ಲ. ಯೋಜನೆಯ ಕುರಿತಂತೆ ಸಂದೇಹ/ ಕುಂದುಕೊರತೆಗಳಿದ್ದಲ್ಲಿ ಸಹಾಯವಾಣಿ (Helpline) – 1902 ಗೆ ಸಂಪರ್ಕಿಸಬಹುದಾಗಿದೆ.

Related News

ಕೆಳಮಟ್ಟದಲ್ಲಿ ನೋಡುತ್ತಿದ್ದ ಖಾತೆಯನ್ನು ಈಗ ವಿಶ್ವವೇ ನೋಡುವಂತಾಗಿದೆ – ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಣ್ಣ ಖಾತೆಯಲ್ಲ. ಈ ಮೊದಲು ಇದನ್ನು ಕೆಳಮಟ್ಟದಲ್ಲಿ ನೋಡಲಾಗುತ್ತಿತ್ತು. ಈಗ ವಿಶ್ವವೇ ನೋಡುವಂತಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಿರಿಯ ನಾಗರಿಕರು...

ಜಲಜೀವನ್ ಮಿಷನ್ ಯೋಜನೆಗೆ ಚನ್ನರಾಜ ಹಟ್ಟಿಹೊಳಿ ಚಾಲನೆ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಸ್ತವಾಡ ಗ್ರಾಮಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ನಿಟ್ಟಿನಲ್ಲಿ ಇವತ್ತು ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಕಾಮಗಾರಿಗಳಿಗೆ ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಚಾಲನೆಯನ್ನು‌ ನೀಡಿದರು. ತಂದನಂತರ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -