spot_img
spot_img
spot_img
21.1 C
Belagavi
Friday, September 30, 2022
spot_img

ಬೆಳಗಾವಿಯಲ್ಲಿ 36 ‘ಗ್ರಾಮ ಒನ್’ ಸೇವಾ ಕೇಂದ್ರ ತೆರೆಯಲು ಅರ್ಜಿ ಆಹ್ವಾನ

spot_img

ಬೆಳಗಾವಿ : ಜಿಲ್ಲೆಯಲ್ಲಿ 758“ಗ್ರಾಮಒನ್” ನಾಗರಿಕ ಸೇವಾ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಇನ್ನೂ ಬಾಕಿ ಉಳಿದ 36 “ಗ್ರಾಮಒನ್” ನಾಗರಿಕ ಸೇವಾ ಕೇಂದ್ರಗಳನ್ನು ತೆರಯಲು ಆನ್‍ಲೈನ್ ಮೂಲಕ ಅರ್ಜಿಗಳನ್ನು ಕರೆಯಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.

ನಗರ ಪ್ರದೇಶಗಳಲ್ಲಿ ಜನರಿಗೆ ಸೇವೆ ನೀಡುತ್ತಿರುವ ಕರ್ನಾಟಕ ಒನ್, ಬೆಳಗಾವಿ ಒನ್ ಮಾದರಿಯಲ್ಲಿ “ಗ್ರಾಮಒನ್” ನಾಗರಿಕ ಸೇವಾ ಕೇಂದ್ರದ ಮೂಲಕ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಗ್ರಾಮೀಣ ಭಾಗದ ಜನರಿಗೆ ವಿವಿಧ ಇಲಾಖೆಗಳ ಸೇವೆಗಳನ್ನು ನೀಡಬೇಕೆಂಬ ಮಹತ್ವಾಕಾಂಕ್ಷಿಯೊಂದಿಗೆ ಸರ್ಕಾರವು “ಗ್ರಾಮಒನ್” ನಾಗರಿಕ ಸೇವಾ ಯೋಜನೆಯನ್ನು ಜಾರಿಗೆ ತಂದಿದೆ ಎಂದು ಹೇಳಿದ್ದಾರೆ.

https:/www.karnatakaone.gov.in/Public/GramOneFranchiseeTerms ಈ ಲಿಂಕ್‍ನ ಮೂಲಕ ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಮಾಹಿತಿ ಕೇಂದ್ರದ ದೂ. ಸಂಖ್ಯೆ: 08226-223160 ಇವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

spot_img

Related News

ಇಂದು ರಾಜ್ಯಕ್ಕೆ ಭಾರತ್ ಜೋಡೋ ಯಾತ್ರೆ

ಚಾಮರಾಜನಗರ : ರಾಹುಲ್ ಗಾಂಧಿ ನೇತೃತ್ವದಲ್ಲಿ ದೇಶಾದ್ಯಂತ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆ ಇಂದು ರಾಜ್ಯಕ್ಕೆ ಆಗಮಿಸಲಿದ್ದು, ಬರಮಾಡಿಕೊಳ್ಳಲು ಕಾಂಗ್ರೆಸ್ ತಯಾರಿ ಜೋರಾಗಿದೆ. ನಾಯಕರನ್ನು ಸ್ವಾಗತಿಸಲು ರಾಜ್ಯ ಕಾಂಗ್ರೆಸ್‌ ನಾಯಕರು ಸರ್ವ ರೀತಿಯಲ್ಲೂ...

ಪ್ರತಿ ಇನ್ಸಸ್ಟಾಗ್ರಾಂ ಪೋಸ್ಟ್ ಗೆ 8 ಕೋಟಿ ರೂ. ಪಡೆಯುವ ವಿರಾಟ್ ಕೊಹ್ಲಿ

ನವದೆಹಲಿ: ವಿರಾಟ್​ ಕೊಹ್ಲಿ ಸಾಮಾಜಿಕ ಜಾಲತಾಣ ಇನ್​ಸ್ಟಾಗ್ರಾಂನಲ್ಲೂ ಹೊಸ ದಾಖಲೆ ಬರೆದಿದ್ದಾರೆ. ಇನ್​ಸ್ಟಾಗ್ರಾಂನಲ್ಲಿ ಅವರು ಪ್ರತಿ ಪ್ರಾಯೋಜಿತ ಪೋಸ್ಟ್​ಗೆ ಬರೋಬ್ಬರಿ 8 ಕೋಟಿ ರೂಪಾಯಿ ಚಾರ್ಜ್​ ಮಾಡುತ್ತಿದ್ದಾರೆ. ಈ ಮೂಲಕ ಇನ್​ಸ್ಟಾಗ್ರಾಂನಲ್ಲಿ ಗರಿಷ್ಠ ಹಣ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -