ಬೆಂಗಳೂರು: ಇತ್ತೀಚಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಮಾಧ್ಯಮ ಸಂಯೋಜಕರಾಗಿದ್ದಂತ ಗುರುಲಿಂಗಸ್ವಾಮಿ ಹೊಳಿಮಠ ಅವರು ಅಕಾಲಿಕವಾಗಿ ನಿಧನಹೊಂದಿದ್ದರು. ಅವರ ನಿಧನದ ತೆರವಾಗಿದ್ದ ಸ್ಥಾನಕ್ಕೆ ಹಿರಿಯ ಪತ್ರಕರ್ತ ಶಂಕರ್ ಹಾಗೋಜಿ ಅವರನ್ನು ನೇಮಕ ಮಾಡಲಾಗಿದೆ.
ಇದಲ್ಲದೇ ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರನ್ನಾಗಿ ಮೋಹನ್ ಕೃಷ್ಣ ಅವರನ್ನು ನೇಮಕ ಮಾಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಮಾಧ್ಯಮ ಸಲಹೆಗಾರರನ್ನಾಗಿ ಮೋಹನ್ ಕೃಷ್ಣ ಅವರನ್ನು ನೇಮಕ ಮಾಡಲಾಗಿದೆ.
ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ಇವರಲ್ಲದೇ ಈ ತಕ್ಷಣದಿಂದ ಜಾರಿಗೆ ಬರುವಂತೆ ಶಂಕರ್ ಪಾಗೋಜಿ ಅವರನ್ನು ಮುಖ್ಯಮಂತ್ರಿಯವರ ಪದಾವಧಿವರೆಗೆ ಅಥವಾ ಮುಂದಿನ ಆದೇಶದವರೆಗೆ ಮುಖ್ಯಮಂತ್ರಿಯವರ ಮಾಧ್ಯಮ ಸಂಯೋಜಕರನ್ನಾಗಿ ನೇಮಿಸಲಾಗಿದೆ ಎಂದು ಆದೇಶ ಹೊರಡಿಸಿದ್ದಾರೆ.