ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ನಾಳೆ ಮೈಸೂರಿನಲ್ಲಿ ಕೃತಜ್ಞತಾ ಸಮಾವೇಶ ಹಮ್ಮಿಕೊಂಡಿದ್ದಾರೆ. ವರುಣ ಕ್ಷೇತ್ರದ ಜನತೆಗೆ ನಂಜನಗೂಡು ತಾಲೂಕಿನ ಬಿಳಿಗೆರೆಯಲ್ಲಿ ಸಮಾವೇಶ ನಡೆಸಲಿದ್ದಾರೆ.
ನಾಳೆ ಬೆಳಗ್ಗೆ 11.30 ಬೆಂಗಳೂರಿನಿಂದ ತೆರಳುವ ಸಿಎಂ ಸಿದ್ದರಾಮಯ್ಯ, ಮಧ್ಯಾಹ್ನ 12.20ಕ್ಕೆ ಸುತ್ತೂರು ಹೆಲಿಪ್ಯಾಡ್ಗೆ ತಲುಪಲಿದ್ದಾರೆ. ಮಧ್ಯಾಹ್ನ 12.35ಕ್ಕೆ ಕೃತಜ್ಞತಾ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಸಮಾವೇಶ ಬಳಿಕ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆಯಲಿದ್ದಾರೆ. ನಂತರ ಹೆಲಿಕ್ಯಾಪ್ಟರ್ ಮೂಲಕ ಮೈಸೂರಿಗೆ ಆಗಮಿಸಿ ನಾಳೆ ಸಂಜೆ 4 ಗಂಟೆಗೆ ಅಧಿಕಾರಿಗಳ ಜತೆ ಸಭೆ ನಡೆಸಲಿದ್ದಾರೆ. ರಾತ್ರಿ ಮೈಸೂರಿನಲ್ಲೇ ವಾಸ್ತವ್ಯ ಹೋಡಿ ಜೂ.11ರ ಬೆಳಗ್ಗೆ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.
ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಎಲ್ಲಾ ಸಮುದಾಯದ ಬೆಂಬಲ ಸಿಕ್ಕಿದೆ. ಕೇವಲ ಒಂದು ಸಮುದಾಯದ ಬೆಂಬಲದಿಂದ ಅಧಿಕಾರಕ್ಕೇರಿಲ್ಲ. ಎಲ್ಲಾ ಸಮಾಜದವರೂ ಸರಕಾರದೊಂದಿಗಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್...
ಬೆಳಗಾವಿ: ಕರ್ನಾಟಕ ರಾಜ್ಯ ಸರ್ಕಾರ ಸ್ಥಿರ ಆಸ್ತಿಗಳು ಮಾರ್ಗಸೂಚಿ ಬೆಲೆ ಪರಿಷ್ಕರಣೆ ಅಕ್ಟೋಬರ್ ಒಂದರಿಂದ ಶೆ. 10%ರಿಂದ 30%ವರೆಗೆ ಹೆಚ್ಚಳ ಮಾಡುವುದಾಗಿ ಆದೇಶ ಹೊರಡಿಸಿದೆ.
ಅದರ ಅಂಗವಾಗಿ ಬೆಳಗಾವಿ ನೋಂದಣಿ ಮತ್ತು ಮುದ್ರಾಂಕ ಇಲಾಖೆ...