ಬೆಂಗಳೂರು: ರಾಜ್ಯದಲ್ಲಿ ಸುಮಾರು 320 ಕಿ.ಮೀ ಉದ್ದದ ಹುನಗುಂದ ಮಾರ್ಗವಾಗಿ ಹಾದುಹೋಗುವ ಬೆಳಗಾವಿ-ರಾಯಚೂರು ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.
ಉತ್ತರ ಕರ್ನಾಟಕ ಮತ್ತು ಹೈದರಾಬಾದ್ ಕರ್ನಾಟಕ ಸಂಪರ್ಕಿಸುವ 320 ಕಿಲೋ ಮೀಟರ್ ಹೆದ್ದಾರಿ ನಿರ್ಮಾಣಕ್ಕಾಗಿ ಈ ಹಿಂದೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.
ಇದೀಗ ಹೆದ್ದಾರಿ ನಿರ್ಮಾಣ ಕಾಮಗಾರಿಗೆ ಅನುಮೋದನೆ ದೊರಕಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಮಾಹಿತಿ ನೀಡಿದರು.
ಹೆದ್ದಾರಿ ನಿರ್ಮಾಣ ಯೋಜನೆಗೆ ಈಗಾಗಲೇ ಭೂಸ್ವಾಧೀನ ಪ್ರಕ್ರಿಯೆ ನಡೆಯುತ್ತಿದೆ. ಈ ಭಾಗದ ಜನರ ಬಹುಕಾಲದ ಬೇಡಿಕೆಯೊಂದು ಶೀಘ್ರವೇ ಈಡೇರುವ ಕಾಲ ಸನ್ನಿಹಿತವಾಗಿದೆ.
ಮೂಲಸೌಕರ್ಯ ಅಭಿವೃದ್ಧಿ ಮತ್ತು ಜನರ ಅನುಕೂಲಕ್ಕೆ ಅನುಗುಣವಾಗಿ ಕಾಮಗಾರಿಗೆ ಒಪ್ಪಿಗೆ ನೀಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ.