ಬೆಂಗಳೂರು : ಶೀಘ್ರವೇ ಮತ್ತೆ 5 ಸಾವಿರ ಕಾನ್ಸ್ ಟೇಬಲ್ ಹುದ್ದೆಗಳ ನೇಮಕ ಮಾಡಲಾಗುವುದು ಎಂದು ಹೇಳಿದ್ದಾರೆ. ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಪೊಲೀಸ್ ಕಾನ್ಸ್ಟೇಬಲ್ಗಳ ನೇಮಕಾತಿ ವಿಳಂಬ ಬಗ್ಗೆ ಬಿಜೆಪಿ ಶಾಸಕ ಪ್ರೀತಮ್ ಗೌಡ ಪ್ರಶ್ನೆ ಮಾಡಿದ್ರು.
ಈ ಕುರಿತು ಮಾಹಿತಿ ನೀಡಿದ ಅವರು, ಗೃಹ ಸಚಿವ ಅರಗಜ್ಞಾನೇಂದ್ರ, 9,432 ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳು ಖಾಲಿ ಇವೆ. ಈಗ 3,500 ಕಾನ್ಸ್‌ಟೇಬಲ್ ನೇಮಕಕ್ಕೆ ನೋಟಿಫಿಕೇಷನ್ ಆಗಿದೆ. ಶೀಘ್ರವೇ ಮತ್ತೆ 5 ಸಾವಿರ ಕಾನ್ಸ್ಟೇಬಲ್ಗಳ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.
ಕೊವಿಡ್ ಕಾರಣದಿಂದ ಕಾನ್ಸ್‌ಟೇಬಲ್ ನೇಮಕಾತಿ ವಿಳಂಬ ಆಗಿದೆ. ಹೀಗಾಗಿ ಕಾನ್ಸ್‌ಟೇಬಲ್ ನೇಮಕಾತಿ ವಯೋಮಿತಿ ಹೆಚ್ಚಿಸುವಂತೆ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮನವಿ ಮಾಡಿದ್ರು.
ಇದಕ್ಕೆ ಉತ್ತರಿಸಿದ ಆರಗ ಜ್ಞಾನೇಂದ್ರ, ಸಾಮಾನ್ಯ ವರ್ಗಕ್ಕೆ 18ರಿಂದ 25 ವರ್ಷ ವಯೋಮಿತಿ ನಿಗದಿ ಮಾಡಲಾಗಿದೆ. ವಯೋಮಿತಿ ಸಡಿಲಿಸಲು ನನಗೂ ಕೂಡ ಫೋನ್ ಬರುತ್ತಿದೆ. ವಯೋಮಿತಿ ಹೆಚ್ಚಳ ಮಾಡುವ ಯೋಚನೆ ಸದ್ಯಕ್ಕಿಲ್ಲ ಎಂದು ಸ್ಪಷ್ಟನೆ ನೀಡಿದ್ರು.