ಬೆಂಗಳೂರು: ವಿಪಕ್ಷ ನಾಯಕರಾಗುವುದಕ್ಕೆ ಬಿಜೆಪಿಯವರೆಲ್ಲಾ ಅಸಮರ್ಥರಾ? ಬಸವರಾಜ ಬೊಮ್ಮಾಯಿ, ಆರ್.ಅಶೋಕ್, ಅಶ್ವತ್ಥ್ ನಾರಾಯಣ, ಸುನೀಲ್ ಕುಮಾರ್, ಯತ್ನಾಳ್ ಇವರೆಲ್ಲರೂ ಅಸಮರ್ಥರಾ? ಇವರಿಗೆ ವಿರೋಧ ಪಕ್ಷದ ನಾಯಕನಾಗುವ ಸಾಮರ್ಥ್ಯ ಇಲ್ವಾ? ಈಗ ಹೆಚ್.ಡಿ.ಕುಮಾರಸ್ವಾಮಿ ವಿಪಕ್ಷ ನಾಯಕ ಅಂತ ಬಿಂಬಿಸಿದ್ದಾರೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಪ್ರಶ್ನಿಸಿದ್ದಾರೆ.
ಡಿಕೆ ಶಿವಕುಮಾರ್ ಸಿಎಂ ಆದರೆ ನಾವು ಬೆಂಬಲ ಕೊಡುತ್ತೇವೆ ಎಂಬ ಹೆಚ್ ಡಿ ಕುಮಾರಸ್ವಾಮಿ ಹೇಳಿಕೆಗೆ ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಟಾಂಗ್ ಕೊಟ್ಟಿದ್ದಾರೆ. ಸುಮ್ಮನೇ ನಾಟಕೀಯ ಹೇಳಿಕೆ ಇದು. ನಮ್ಮಲ್ಲಿ ಗೊಂದಲ ಸೃಷ್ಟಿ ಮಾಡಲು ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಯಾರೂ ಗೊಂದಲ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದರು.