Ad imageAd image

ಪೂಂಚ್‌ನಲ್ಲಿ 300 ಅಡಿ ಆಳದ ಕಂದಕಕ್ಕೆ ಬಿತ್ತು ಸೇನಾ ವಾಹನ – ಬೆಳಗಾವಿ ಯೋಧ ಹುತಾತ್ಮ

ratnakar
ಪೂಂಚ್‌ನಲ್ಲಿ 300 ಅಡಿ ಆಳದ ಕಂದಕಕ್ಕೆ ಬಿತ್ತು ಸೇನಾ ವಾಹನ – ಬೆಳಗಾವಿ ಯೋಧ ಹುತಾತ್ಮ
WhatsApp Group Join Now
Telegram Group Join Now

ಬೆಳಗಾವಿ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ 300 ಅಡಿ ಆಳದ ಕಂದಕಕ್ಕೆ ಸೇನಾ ವಾಹನ ಬಿದ್ದು ಬೆಳಗಾವಿ ಯೋಧ ಸೇರಿದಂತೆ ಐವರು ಹುತಾತ್ಮರಾಗಿದ್ದಾರೆ.

ಬೆಳಗಾವಿ ಸಾಂಭ್ರದ ದಯಾನಂದ  ಮೃತರಾಗಿದ್ದಾರೆ. ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ಸೇನಾ ಟ್ರಕ್ ರಸ್ತೆಯಿಂದ ಸ್ಕಿಡ್ ಆಗಿ ಕಂದಕಕ್ಕೆ ಬಿದ್ದಿತ್ತು.

ಘರೋವಾ ಪ್ರದೇಶದಲ್ಲಿ ಸಂಜೆ 5:20 ರ ಸುಮಾರಿಗೆ ಆರು ವಾಹನಗಳ ಬೆಂಗಾವಲು ಪಡೆಯ ಭಾಗವಾಗಿದ್ದ ಸೇನಾ ವಾಹನವು ಜಿಲ್ಲೆಯ ಬನೋಯ್‌ಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

11 ಮದ್ರಾಸ್ ಲೈಟ್ ಇನ್‌ಫೆಂಟ್ರಿಗೆ ಸೇರಿದ ವಾಹನವು ನಿಲಂ ಪ್ರಧಾನ ಕಛೇರಿಯಿಂದ ಬಲ್ನೋಯಿ ಘೋರಾ ಪೋಸ್ಟ್‌ಗೆ ತೆರಳುತ್ತಿದ್ದಾಗ ಘಟನೆ ನಡೆದಿದೆ. ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ.  ಗಾಯಗೊಂಡ ಸಿಬ್ಬಂದಿಗೆ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸೇನೆ ತಿಳಿಸಿದೆ.

WhatsApp Group Join Now
Telegram Group Join Now
Share This Article