ರಾಯಚೂರು: ಅಕ್ಕಿ ವ್ಯಾಪಾರಿ ಒಬ್ಬರಿಗೆ ಬೆದರಿಕೆ ಹಾಕಿ ಐದು ಲಕ್ಷ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಬೆಂಗಳೂರು ಮೂಲದ ಆರು ಮಂದಿ ನಕಲಿ ಪತ್ರಕರ್ತರನ್ನು ಬಂಧಿಸಿರುವ ಘಟನೆ ಜಿಲ್ಲೆಯ ಲಿಂಗಸಗೂರು ತಾಲೂಕಿನ ಮುದಗಲ್ ಪಟ್ಟಣದಲ್ಲಿ ಈ ಘಟನೆ ನಡೆದಿದೆ.
ಬಂಧಿತರನ್ನು ರಾಜು ಬಿ, ನಾಗರಾಜ ಸಿ, ಪ್ರದಿಪಗೌಡ, ಅರ್ಪಿತಾ, ಮಹಾದೇವಿ, ಮಘಾ ಎಸ್ ಎಂದು ಗುರುತಿಸಲಾಗಿದೆ.
ಅಕ್ಕಿ ವ್ಯಾಪಾರಿ ವೀರೇಶ್ ಎನ್ನುವವರ ಅಂಗಡಿಗೆ ಕ್ಯಾಮೆರಾ ಮತ್ತು ಲೋಗೋ ಹಿಡಿದು ನೀವು ಅಕ್ರಮವಾಗಿ ಪಡಿತರ ಆಹಾರ ಧಾನ್ಯದ ಅಕ್ಕಿ ಮಾರಾಟ ಮಾಡುತಿದ್ದೀರಿ, ನಿಮ್ಮ ಬಗ್ಗೆ ಸುದ್ದಿವಾಹಿನಿಯಲ್ಲಿ ಪ್ರಸಾರ ಮಾಡುತ್ತೇವೆ ಎಂದು ಬೆದರಿಕೆ ಹಾಕಿದರು.
ಸುದ್ದಿ ಪ್ರಸಾರ ಮಾಡಬಾರದೆಂದರೆ, 5 ಲಕ್ಷ ರೂಪಾಯಿ ಕೊಡಿ, ಇಲ್ಲವಾದಲ್ಲಿ ಸುದ್ದಿ ಪ್ರಸಾರ ಮಾಡಲಾಗುವುದು ಎಂದು ಬೆದರಿಕೆ ಹಾಕಿದ್ದಾರೆ. ವಿರೇಶ್ ಕೂಡಲೇ ಪೊಲೀಸರಿಗೆ ಹಾಗೂ ಸ್ಥಳೀಯ ಪತ್ರಕರ್ತರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಧಾವಿಸಿದ ಮುದಗಲ್ ಪೊಲೀಸರು ನಕಲಿ ಪತ್ರಕರ್ತರನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತರಿಂದ ಕ್ಯಾಮೆರಾ, ಐಡಿ ಕಾರ್ಡ್ ಹಾಗೂ ಮಾರುತಿ ಸ್ವಿಫ್ಟ್ ಕಾರ್ ಅನ್ನು ಜಪ್ತಿ ಮಾಡಿದ್ದಾರೆ.ಇವರ ವಿರುದ್ಧ ಈಗಾಗಲೇ ನಾಲ್ಕೈದು ಪ್ರಕರಣಗಳು ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ದಾಖಲಾಗಿವೆ.