spot_img
spot_img
spot_img
18 C
Belagavi
Thursday, September 29, 2022
spot_img

ರಾತ್ರೋರಾತ್ರಿ ಮುರುಘಾ ಶರಣರ ಬಂಧನ

spot_img

ಚಿತ್ರದುರ್ಗ : ಮುರಘಾಮಠದ ಶ್ರೀಗಳ ವಿರುದ್ಧ ಫೋಕ್ಸೋ ಪ್ರಕರಣದ ಹಿನ್ನೆಲೆಯಲ್ಲಿ ಶಿವಮೂರ್ತಿ ಶ್ರೀಗಳನ್ನು ಬಂಧಿಸಲಾಗಿದೆ. ಸದ್ಯ ಅವರನನ್ನು 14 ದಿನಗಳ ನ್ಯಾಯಾಂಗ ಬಂಧನವನ್ನು ವಿಧಿಸಲಾಗಿದ್ದು, ಚಿತ್ರದುರ್ಗದ ಜಿಲ್ಲಾ ಕಾರಾಗೃಹ ಕರೆದೊಯ್ಯಲಾಗಿದೆ.

ಗುರುವಾರ ರಾತ್ರಿ ಪೊಲೀಸರು ಬಂಧಿಸಿದ್ದ. ಬಳಿಕ ವೈದ್ಯಕೀಯ ಪರೀಕ್ಷೆಯ ನಂತರ ಪೊಲೀಸರು ಶ್ರೀಗಳನ್ನು ಚಿತ್ರದುರ್ಗದ ಹೆಚ್ಚುವರಿ ಸೆಷನ್ಸ್ ಕೋರ್ಟ್ ಗೆ ಹಾಜರುಪಡಿಸಿದ್ದಾರೆ. ವಿಚಾರಣೆ ನಡೆಸಿದ ನ್ಯಾ. ಕೋಮಾಲಾ ಅವರು ಶ್ರೀಗಳನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಿದ್ದಾರೆ.

ಈ ನಡುವೆ ಮುರುಘಾ ಶರಣರು ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿರುವ ಚಿತ್ರದುರ್ಗದ 1ನೇ ಜಿಲ್ಲಾ ಹೆಚ್ಚುವರಿ ನ್ಯಾಯಾಲಯ ವಾದಿ-ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿತ್ತು.

ಅವರನ್ನು ಅಜ್ಞಾತ ಸ್ಥಳಕ್ಕೆ ಕರೆದುಕೊಂಡು ಹೋಗಲಾಗಿದ್ದು, ಅಲ್ಲಿ ಅವರನ್ನು ವಿಚಾರಣೆ ನಡೆಸಲಾಗುತ್ತಿದೆ ಅಂತ ಪ್ರಾಥಮಿಕ ಮೂಲಗಳಿಂದ ತಿಳಿದು ಬಂದಿದೆ. ಶ್ರೀಗಳ ವಿರುದ್ದ ಅಟ್ರಾಸಿಟಿ, ಸುಮಟೋ ಕೇಸ್‌ ಕೂಡ ದಾಖಲಾಗಿದೆ. ಶ್ರೀಗಳಿಗೆ ಸಂಕಷ್ಟ ಎದುರಾಗಿದೆ.

spot_img

Related News

ಡಿ.ಕೆ.ಶಿವಕುಮಾರ್ ಮನೆ, ಕಚೇರಿ ಮೇಲೆ ಸಿಬಿಐ ದಾಳಿ

ಬೆಂಗಳೂರು: ಇಡಿ ಅಧಿಕಾರಿಗಳ ದಾಳಿಯ ಬಳಿಕ ವಿಚಾರಣೆ ಎದುರಿಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಕೇಂದ್ರ ತನಿಖಾ ದಳದ ಅಧಿಕಾರಿಗಳು ಡಿ ಕೆ ಶಿವಕುಮಾರ್...

ಮೂರು ಪಡೆಗಳ ಮುಖ್ಯಸ್ಥರಾಗಿ ಅನಿಲ್ ಚವ್ಹಾಣ್ ನೇಮಕ

ನವದೆಹಲಿ: ನಿವೃತ್ತ ಲೆಫ್ಟಿನೆಂಟ್ ಜನರಲ್ ಅನಿಲ್ ಚವ್ಹಾಣ್ ಅವರನ್ನು ನೂತನ ಸಿಡಿಎಸ್ ಆಗಿ ನೇಮಕ ಮಾಡಲಾಗಿದೆ. ಎರಡನೇ ಸಿಡಿಎಸ್ ಅನಿಲ್ ಚವ್ಹಾಣ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -