ಬೆಂಗಳೂರು : ಸೋಮವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಳಗಾವಿಗೆ ಆಗಮಿಸಲಿದ್ದಾರೆ. ವಿಶೇಷ ವಿಮಾನಲ್ಲಿ ಬೆಳಗ್ಗೆ ಆಗಮಿಸಲಿರುವ ಅವರು ಕೇಂದ್ರ ಸಚಿವ ನಿತಿನ್ ಗಡ್ಕರಿ ಜತೆಗೆ ಬೆಳಗಾವಿ ಜಿಲ್ಲಾ ಕ್ರೀಡಾಂಗಣದಲ್ಲಿ 5 ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ನಂತರ ಹುಬ್ಬಳ್ಳಿಯಲ್ಲಿ 26 ಹಾಗೂ ಮಂಗಳೂರಿನಲ್ಲಿ 15 ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ಕಾರ್ಯಕ್ರಮಗಳಲ್ಲಿ ಸಹ ಅವರು ಪಾಲ್ಗೊಳ್ಳುವರು.