ಬೆಳಗಾವಿ : ಕನ್ನಡ ಬಾವುಟ ಹಾರಿಸಿದಕ್ಕೆ, ಸಹಪಾಠಿಗಳು ವಿದ್ಯಾರ್ಥಿಗೆ ಥಳಿಸಿರುವ ಘಟನೆ ನಗರದ ಟೀಳಕವಾಡಿಯಲ್ಲಿನ ಗೋಗಟೆ ಕಾಲೇಜಿನಲ್ಲಿ ನಡೆದಿದೆ.
ಗೋಗಟೆ ಕಾಲೇಜಿನಲ್ಲಿ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಕನ್ನಡ ಬಾವುಟ ಹಿಡಿದು ವಿದ್ಯಾರ್ಥಿ ಡ್ಯಾನ್ಸ್ ಮಾಡಿದ್ದಾನೆ. ಇದನ್ನು ಕಂಡ ಸಹಪಾಠಿಗಳು ಕನ್ನಡ ಬಾವುಟ ಪ್ರದರ್ಶಿಸಿದ ವಿದ್ಯಾರ್ಥಿಗೆ ಥಳಿಸಿದ್ದಾರೆ.
ನಿನ್ನೆ ಸಂಜೆ 7.30ರ ಸುಮಾರಿಗೆ ಗೋಗಟೆ ಕಾಲೇಜಿನಲ್ಲಿ ಇಂಟರ್ ಕಾಲೇಜು ಫೆಸ್ಟ್ ನಡೆಯುತ್ತಿತ್ತು. ಈ ವೇಳೆ ಕನ್ನಡ ಬಾವುಟ ಹಿಡಿದು ಡ್ಯಾನ್ಸ್ ಮಾಡುತ್ತಿದ್ದ ವಿದ್ಯಾರ್ಥಿ ಮೇಲೆ ಮೂರು ವಿದ್ಯಾರ್ಥಿಗಳು ಹಲ್ಲೆ ಮಾಡಿದ್ದಾರೆ.
ಹಲ್ಲೆಗೊಳಗಾದ ವಿದ್ಯಾರ್ಥಿಯಿಂದ ಮಾಹಿತಿ ಪಡೆದುಕೊಂಡಿದ್ದೇವೆ. ಯಾರು ಹಲ್ಲೆ ಮಾಡಿದ್ದಾರೆ ಅವರ ಗುರುತು ಪತ್ತೆ ಹಚ್ಚಿ ವಿಚಾರಣೆ ಮಾಡುತ್ತೇವೆ. ಸದ್ಯ ಪರಿಸ್ಥಿತಿ ಶಾಂತಿಯುತವಾಗಿದೆ ಎಂದು ಡಿಸಿಪಿ ರವೀಂದ್ರ ಗಡಾದಿ ಹೇಳಿದ್ದಾರೆ.