ಮೈಸೂರು: ನಾನು ಜನರ ನಾಡಿಮಿಡಿತ ಅರ್ಥಮಾಡಿಕೊಂಡಿರುವುದು ಸರಿಯಿದೆ. ನಾನೇನು ಫಲಿತಾಂಶದ ನಿರೀಕ್ಷೆ ಮಾಡಿದ್ದೆನೋ ಅದೇ ಫಲಿತಾಂಶ ಬರಲಿದೆ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಹೇಳಿದರು. ಕರಾವಳಿ ಭಾಗದಲ್ಲಿ ಈ ಬಾರಿ ನಮ್ಮ ಸೀಟು ಹೆಚ್ಚಾಗಲಿದೆ.
ಬಜರಂಗದಳ ವಿಚಾರ ಒಂದು ವಿವಾದದ ವಿಚಾರವೇ ಅಲ್ಲ. ನಾವು ನಮ್ಮ ಪ್ರಣಾಳಿಕೆಯಲ್ಲಿ ಬಹಳ ಸ್ಪಷ್ಟವಾಗಿ ಹೇಳಿದ್ದೇವೆ. ಬಿಜೆಪಿಯವರು ಅದನ್ನು ಅಪಪ್ರಚಾರ ಮಾಡಿದರು ಎಂದು ವಾಗ್ದಾಳಿ ಮಾಡಿದರು.
ಈ ಬಾರಿ ಕಾಂಗ್ರೆಸ್ಗೆ ಬಹುಮತ ಬರಲಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು. ಮೈಸೂರಿನ ನಿವಾಸದಲ್ಲಿ ಮಾತನಾಡಿದ ಅವರು ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ 130ರಿಂದ 150 ಸ್ಥಾನ ಗೆಲ್ಲುತ್ತೆ. ಕರಾವಳಿ ಭಾಗದಲ್ಲೂ ನಾವು ಹೆಚ್ಚು ಸ್ಥಾನ ಗೆಲ್ಲುತ್ತೇವೆ ಎಂದು ಹೇಳಿದರು.