Ad imageAd image

ಕೃಷ್ಣ ಜನ್ಮಾಷ್ಟಮಿ: ನಾಳೆ ಬೆಂಗಳೂರಿನಾದ್ಯಂತ ಮಾಂಸ ಮಾರಾಟಕ್ಕೆ ನಿಷೇಧ

ratnakar
ಕೃಷ್ಣ ಜನ್ಮಾಷ್ಟಮಿ: ನಾಳೆ ಬೆಂಗಳೂರಿನಾದ್ಯಂತ ಮಾಂಸ ಮಾರಾಟಕ್ಕೆ ನಿಷೇಧ
WhatsApp Group Join Now
Telegram Group Join Now

ಬೆಂಗಳೂರು: ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಆಗಸ್ಟ್​ 26ರ ಸೋಮವಾರದಂದು ಇಡೀ ಬೆಂಗಳೂರಿನಾದ್ಯಂತ ಮಾಂಸ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ನಾಳೆ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ಬಂದ್ ಮಾಡಬೇಕೆಂದು ಬಿಬಿಎಂಪಿ ಪಶುಪಾಲನೆ ವಿಭಾಗದ ಜಂಟಿ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.

ಕೃಷ್ಣ ಜನ್ಮಾಷ್ಟಮಿ ದಿನದಂದು ಮಾಂಸ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿದ್ದು, ಆ ದಿನ ಯಾರೂ ಯಾವುದೇ ರೀತಿಯ ಮಾಂಸ ಹಾಗೂ ಹಸಿ ಮೀನು ಮಾರಾಟ ಮಾಡಬಾರದು ಎಂದು ತಿಳಿಸಿದೆ. ಪಟ್ಟಣದ ಯಾವುದೇ ಮಾಂಸ ಮಾರಾಟದ ಅಂಗಡಿಗಳು, ಕೋಳಿ ಅಂಗಡಿಗಳು, ಮೀನುಮಾರಾಟ ಮಾಡಬಾರದು ಎಂದು ಖಡಕ್ ಆಗಿ ಸೂಚಿಸಲಾಗಿದೆ. ಆದೇಶ ಮೀರಿ ಮಾರಾಟ ಮಾಡಿದರೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದೆಂದು ಎಚ್ಚರಿಸಿದ್ದಾರೆ.

ವಿಷ್ಣುವಿನ ಎಂಟನೇ ಅವತಾರವಾದ ಭಗವಾನ್ ಕೃಷ್ಣನ ಜನ್ಮ ದಿನವೆಂದು ಜನ್ಮಾಷ್ಟಮಿಯನ್ನು ಆಚರಿಸಲಾಗುವುದು. ಈ ವರ್ಷ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಆಗಸ್ಟ್‌ 26 ರಂದು ಆಚರಿಸಲಾಗುವುದು. ಈ ಶುಭ ದಿನದಂದು ಜನರು ಶ್ರೀಕೃಷ್ಣನನ್ನು ಪೂಜಿಸಿ, ಮಂತ್ರ, ಭಜನೆಯನ್ನು ಹಾಡಿ, ಉಪವಾಸ ವ್ರತವನ್ನು ಮಾಡುತ್ತಾರೆ. ಕೃಷ್ಣನು ಮಧ್ಯರಾತ್ರಿಯಲ್ಲಿ ಜನಿಸಿದನೆಂದು ನಂಬಲಾದ ಭಕ್ತರು ಜನ್ಮಾಷ್ಟಮಿಯ ತಡರಾತ್ರಿಯಲ್ಲಿ ಕೃಷ್ಣನಿಗೆ ಪೂಜೆಯನ್ನು ಸಲ್ಲಿಸುತ್ತಾರೆ. ದೇವಾಲಯಗಳನ್ನು ಮತ್ತು ಮನೆಗಳನ್ನು ವಿಶಿಷ್ಟವಾಗಿ ಅಲಂಕರಿಸುತ್ತಾರೆ.

ಉತ್ತರ ಪ್ರದೇಶದಲ್ಲಿ ಇಂದು ಶ್ರೀಕೃಷ್ಣ ಜನ್ಮಾಷ್ಟಮಿ ಮಹೋತ್ಸವ ನಡೆಯಲಿದೆ. ಮಥುರಾದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಮಹೋತ್ಸವಕ್ಕೆ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಚಾಲನೆ ನೀಡಲಿದ್ದಾರೆ. ಶ್ರೀಕೃಷ್ಣ ಜನ್ಮಾಷ್ಟಮಿ ಮಹೋತ್ಸವ ಹಿನ್ನೆಲೆ ಮಥುರಾ ನಗರವನ್ನು ಅಲಂಕರಿಸಲಾಗಿದೆ. ಕೊಳಲು ಹಿಡಿದು ಕೃಷ್ಣನ ವೇಷ ಧರಿಸಿ ಜನತೆ ಕೂಡ ಸಂಭ್ರಮಿಸುತ್ತಿದ್ದಾರೆ.

WhatsApp Group Join Now
Telegram Group Join Now
Share This Article