ಬೆಂಗಳೂರು: ಖಾಸಗಿ ಸಾರಿಗೆ ಒಕ್ಕೂಟಗಳು ವಿವಿಧ ಬೇಡಿಕೆಗಳನ್ನು ಸರ್ಕಾರದ ಮುಂದೆ ಇಟ್ಟಿದ್ದು, ಇವುಗಳನ್ನು ಈಡೇರಿಸುವಂತೆ ಇಂದು ಪ್ರತಿಭಟನೆ ನಡೆಸಿ, ಬೆಂಗಳೂರು ಬಂದ್ಗೆ ಕರೆ ನೀಡಿದ್ದವು. ಇದೀಗ ಒಟ್ಟಕೂಟಗಳು ಬಂದ್ ಕರೆ ಹಿಂಪಡೆದಿವೆ.
ಬಂದ್ ಹಿಂಪಡೆದು ಬಳಿಕ ಮಾತನಾಡಿದ ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ನಟರಾಜ್ ಶರ್ಮಾ, 32ರಲ್ಲಿ 27 ಬೇಡಿಕೆಗಳನ್ನು ಈಡೇರಿಸುವುದಾಗಿ ಸಚಿವರು ಭರವಸೆ ನೀಡಿದ್ದಾರೆ. ಹಾಗಾಗಿ ಬಂದ್ ಹಿಂಪಡೆಯುತ್ತಿದ್ದೇವೆ. ಟ್ಯಾಕ್ಸ್ ಕಡಿಮೆ ಬಗ್ಗೆಯೂ ರಾಮಲಿಂಗಾರೆಡ್ಡಿ ಭರವಸೆ ನೀಡಿದ್ದಾರೆ. ಬೇಡಿಕೆ ಈಡೇರಿಸದಿದ್ದರೆ ನಾಡಿದ್ದು ಮತ್ತೆ ಹೋರಾಟ ಮಾಡುತ್ತೇವೆ ಎಂದು ಹೇಳಿದ್ದಾರೆ.