Ad imageAd image
- Advertisement - 

ನ.19 ರಿಂದ 21ರವರೆಗೆ ಬೆಂಗಳೂರು ತಂತ್ರಜ್ಞಾನ ಶೃಂಗಸಭೆ

ratnakar
ನ.19 ರಿಂದ 21ರವರೆಗೆ ಬೆಂಗಳೂರು ತಂತ್ರಜ್ಞಾನ ಶೃಂಗಸಭೆ
WhatsApp Group Join Now
Telegram Group Join Now

ನವೋದ್ಯಮಗಳು ಮತ್ತು ಜಾಗತಿಕ ಮಟ್ಟದ ಹೂಡಿಕೆದಾರರನ್ನು ಒಂದೇ ವೇದಿಕೆಯಲ್ಲಿ ತರಲು ಆಯೋಜಿಸಲಾಗಿರುವ ಬೆಂಗಳೂರು ತಂತ್ರಜ್ಞಾನ ಶೃಂಗಸಭೆ – 2024 ಇದೇ ನವೆಂಬರ್‌ 19 ರಿಂದ 21ರ ವರೆಗೆ ನಡೆಯಲಿದೆ ಎಂದು ಮಾಹಿತಿ ಮತ್ತು ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಆಸ್ಟ್ರೇಲಿಯಾ, ಬ್ರಿಟನ್‌, ಫ್ರಾನ್ಸ್‌, ಆಸ್ಟ್ರೀಯ, ಜರ್ಮನಿ, ಸ್ವಿಡ್ಜರ್ಲೆಂಡ್‌, ಇಸ್ರೇಲ್‌, ಅಮೆರಿಕದ ಸಹಯೋಗದಲ್ಲಿ ಶೃಂಗಸಭೆ ನಡೆಯಲಿದೆ. ಉದ್ಘಾಟನೆ ಸಮಾರಂಭದಲ್ಲಿ ಜರ್ಮನಿಯ ಆರ್ಥಿಕ ಇಲಾಖೆಯ ಮುಖ್ಯಸ್ಥರು ಭಾಗಿಯಾಗಲಿದ್ದಾರೆ. ಮೂರು ದಿನಗಳ ಶೃಂಗಸಭೆಯಲ್ಲಿ ನವೋದ್ಯಮಗಳಿಗೆ ಸಂಬಂಧಿಸಿದಂತೆ ಹಲವು ವಿಚಾರಗೋಷ್ಠಿಗಳು ನಡೆಯಲಿವೆ. ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ನವೋದ್ಯಮಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.

WhatsApp Group Join Now
Telegram Group Join Now
Share This Article