ಬೆಂಗಳೂರು: ನಾಳೆ ವಿಧಾನಪರಿಷತ್ ಸಭಾಪತಿ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿಯಿಂದ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ನಾಮಪತ್ರ ಸಲ್ಲಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ, ಸಚಿವರ ನೇತೃತ್ವದಲ್ಲಿ ವಿಧಾನ ಪರಿಷತ್ ಕಾರ್ಯದರ್ಶಿಗಳಿಗೆ ನಾಮಪತ್ರ ಸಲ್ಲಿಸಿದ್ದಾರೆ.
ಬಿಜೆಪಿ ಸೇರಲು ಸಭಾಪತಿ ನೀಡುವ ಭರವಸೆಯನ್ನ ಬಿಜೆಪಿ ನಾಯಕರು ಕೊಟ್ಟಿದ್ದರು. ಕೊಟ್ಟ ಮಾತಿನಂತೆ ಸಭಾಪತಿ ಸ್ಥಾನ ನೀಡಿ ಬಿಜೆಪಿ ಮಾತು ಉಳಿಸಿಕೊಂಡಿದೆ.
ಬಹುಮತ ಇರುವ ಕಾರಣ ನಾಳೆ ನಡೆಯುವ ಚುನಾವಣೆಯಲ್ಲಿ ಹೊರಟ್ಟಿ ಅವರು ಅವಿರೋಧ ಆಯ್ಕೆ ಆಗಲಿದ್ದಾರೆ.