ತುಮಕೂರು: ರಾಷ್ಟ್ರೀಯ, ಸಂಸ್ಕೃತಿ ವಿಚಾರ ಎಲ್ಲಿ ತೆಗೆಯಬೇಕೋ ಅಲ್ಲಿ ತೆಗೆದಿದ್ದಾರೆ. ಅವರು ಗೆದಿರುವುದು ಮುಸ್ಲಿಂ ಮತಗಳಿಂದಲೇ ಗೆದಿದ್ದಾರೆ ಭಾವಿಸಿದಂತಿದೆ ಎಂದು ಸಿಎಂ ಸಿದ್ಧರಾಮಯ್ಯ ವಿರುದ್ಧ ಮಾಜಿ ಶಿಕ್ಷಣ ಸಚಿವ ಬಿಸಿ ನಾಗೇಶ್ ವಾಗ್ದಾಳಿ ಮಾಡಿದ್ದಾರೆ.
ಸಾವರ್ಕರ್, ಹೆಡ್ಗೆವಾರ್ ಹಾಗೂ ಸೂಲಿಬೆಲೆ ಪಠ್ಯ ಕೈ ಬಿಟ್ಟ ವಿಚಾರವಾಗಿ ಮಾತನಾಡಿದ ಅವರು, ಯಾವಾಗ ಸಿಎಂ ಸಿದ್ದರಾಮಯ್ಯ ಆದರೂ ಹೀಗೆ ಮಾಡುತ್ತಾರೆ ಅಂತಾ ಗೊತ್ತಿದೆ. ರೈತರು, ಮಕ್ಕಳ ಬಗ್ಗೆ ರಾಜ್ಯ ಸರ್ಕಾರಕ್ಕೆ ಯೋಚನೆಯೇ ಇಲ್ಲ. ಸಿದ್ದರಾಮಯ್ಯಗೆ ಕಾಣುತ್ತಿರುವುದು ಟಿಪ್ಪು ಸುಲ್ತಾನ್ ಅಷ್ಟೇ. ಸಿದ್ದರಾಮಯ್ಯ ಹಿಂದೂ ವಿರೋಧಿ, ಇದರಲ್ಲಿ ಅನುಮಾನವೇ ಇಲ್ಲ. ರಾಜ್ಯ ಸರ್ಕಾರ ಮಕ್ಕಳಿಗೆ ಸುಳ್ಳು ಇತಿಹಾಸ ಹೇಳಲು ಹೊರಟಿದೆ ಎಂದು ವಾಗ್ದಾಳಿ ಮಾಡಿದರು.
ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಎಲ್ಲಾ ಸಮುದಾಯದ ಬೆಂಬಲ ಸಿಕ್ಕಿದೆ. ಕೇವಲ ಒಂದು ಸಮುದಾಯದ ಬೆಂಬಲದಿಂದ ಅಧಿಕಾರಕ್ಕೇರಿಲ್ಲ. ಎಲ್ಲಾ ಸಮಾಜದವರೂ ಸರಕಾರದೊಂದಿಗಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್...
ಬೆಳಗಾವಿ: ಕರ್ನಾಟಕ ರಾಜ್ಯ ಸರ್ಕಾರ ಸ್ಥಿರ ಆಸ್ತಿಗಳು ಮಾರ್ಗಸೂಚಿ ಬೆಲೆ ಪರಿಷ್ಕರಣೆ ಅಕ್ಟೋಬರ್ ಒಂದರಿಂದ ಶೆ. 10%ರಿಂದ 30%ವರೆಗೆ ಹೆಚ್ಚಳ ಮಾಡುವುದಾಗಿ ಆದೇಶ ಹೊರಡಿಸಿದೆ.
ಅದರ ಅಂಗವಾಗಿ ಬೆಳಗಾವಿ ನೋಂದಣಿ ಮತ್ತು ಮುದ್ರಾಂಕ ಇಲಾಖೆ...