spot_img
spot_img
spot_img
21.1 C
Belagavi
Friday, September 30, 2022
spot_img

ಉಕ್ರೇನ್‌ನಲ್ಲಿದ್ದಾರೆ ಬೆಳಗಾವಿಯ 17 ವಿದ್ಯಾರ್ಥಿಗಳು: ಕುಟುಂಬಸ್ಥರಿಗೆ ಧೈರ್ಯ ತುಂಬಿದ ಡಿಸಿ

spot_img

ಬೆಳಗಾವಿ: ಉಕ್ರೇನ್‌ನಲ್ಲಿ ಬೆಳಗಾವಿ ಜಿಲ್ಲೆಯ ಇನ್ನೂ 17 ವೈದ್ಯಕೀಯ ವಿದ್ಯಾರ್ಥಿಗಳು ಸಿಲುಕಿದ್ದಾರೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಮಾಹಿತಿ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಕ್ರೇನ್‌ನಲ್ಲಿ ಬೆಳಗಾವಿಯ 19 ವಿದ್ಯಾರ್ಥಿಗಳು ಸಿಲುಕಿದ್ದರು.

ಅದರಲ್ಲೀಗ ಇಬ್ಬರು ಮರಳಿ ಬಂದಿದ್ದಾರೆ. ನೋಡಲ್ ಅಧಿಕಾರಿ ಡಾ.ಮನೋಜ್ ರಾಜನ್ ನಮಗೆ ವರದಿ ನೀಡಿದ್ದಾರೆ. ವರದಿ ಪ್ರಕಾರ ಉಕ್ರೇನ್‌ನಲ್ಲಿ ಜಿಲ್ಲೆಯ 19 ವಿದ್ಯಾರ್ಥಿಗಳು ಇದ್ದರು ಎಂದರು. 17 ಜನರ ಪಟ್ಟಿಯನ್ನು ಆಯಾ ತಾಲೂಕಿನ ತಹಶೀಲ್ದಾರ್‌ಗಳಿಗೆ ಕೊಟ್ಟಿದ್ದೇವೆ.

ಅವರ ಮನೆಗೆ ಹೋಗಿ ಧೈರ್ಯ, ಆತ್ಮವಿಶ್ವಾಸ ತುಂಬುವ ಕೆಲಸ ಮಾಡಲಾಗುತ್ತಿದೆ. ಈಗಾಗಲೇ 12 ವಿದ್ಯಾರ್ಥಿಗಳ ಮನೆಗಳಿಗೆ ಭೇಟಿ ನೀಡಿ ಧೈರ್ಯ ತುಂಬಲಾಗಿದೆ. ನಾನೂ ಸಹ ಕೆಲವು ವಿದ್ಯಾರ್ಥಿಗಳ ಪಾಲಕರ ಭೇಟಿಯಾಗುವೆ. ರಾಯಭಾಗ ಮೂಲದ ವಿದ್ಯಾರ್ಥಿ ಪಾಲಕರೊಂದಿಗೆ ನಾನೇ ಮಾತನಾಡಿದ್ದೇನೆ ಎಂದರು.

ನಾವೆಲ್ಲರೂ ಸೇರಿ ಪೋಷಕರಿಗೆ ಆತ್ಮವಿಶ್ವಾಸ ಹೆಚ್ಚಿಸುವ ಕೆಲಸ ಮಾಡಬೇಕು. ಪಾಲಕರು ನೀಡಿದ ಮಾಹಿತಿ ರಾಜ್ಯ ನೋಡಲ್ ಅಧಿಕಾರಿಗಳಿಗೆ ನೀಡಿದ್ದೇವೆ.

ಮುಂಬೈಗೆ ಬೆಳಗಾವಿಯ ಇಬ್ಬರು ಅಧಿಕಾರಿಗಳು ಹೋಗಿ ಮೂರು ದಿನಗಳಾಗಿದೆ.ರಾಜ್ಯದ ವಿದ್ಯಾರ್ಥಿಗಳ ಮಾಹಿತಿ ಪಡೆದು ಟಿಕೆಟ್ ಬುಕ್ ಮಾಡಿ ಸ್ವಂತ ಊರಿಗೆ ಕಳಿಸುವ ವ್ಯವಸ್ಥೆ ಮಾಡುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಹೇಳಿದರು.

spot_img

Related News

ಆರ್ ಟಿಓ ಚೆಕ್ ಪೋಸ್ಟಗಳ ಮೇಲೆ ಲೋಕಾಯುಕ್ತ ಧಿಡೀರ್ ದಾಳಿ

ಬೆಂಗಳೂರು : ರಾಜ್ಯದ ಆರ್ ಟಿಓ ಚೆಕ್ ಪೋಸ್ಟಗಳ ಮೇಲೆ ಲೋಕಾಯುಕ್ತ ತಂಡ ಇಂದು ಧಿಡೀರ್ ದಾಳಿ ನಡೆಸಿದೆ. ವಾಹನ ಸವಾರರಿಂದ ಹಣ ವಸೂಲಿ ದೂರುಗಳು ಕೇಳಿ ಬಂದ ಹಿನ್ನೆಲೆ ಕಲಬುರಗಿ, ಬೀದರ್...

ಸಿಮ್ ಕಾರ್ಡ್ ಪಡೆಯಲು ನಕಲಿ ದಾಖಲೆ ನೀಡಿದರೇ 1 ವರ್ಷ ಜೈಲು, 50 ಸಾವಿರ ದಂಡ

ನವದೆಹಲಿ: ಸಿಮ್ ಕಾರ್ಡ್ ಪಡೆಯಲು ನಕಲಿ ದಾಖಲೆ ನೀಡಿದರೇ ಭಾರತೀಯ ದೂರಸಂಪರ್ಕ ಮಸೂದೆ 2022 ರ ಸಿದ್ಧಪಡಿಸಿದ ಕರಡು ಪ್ರತಿಯ ಪ್ರಕಾರ, ನೀವು ಒಂದು ವರ್ಷ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಅಥವಾ 50,000...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -