spot_img
spot_img
spot_img
18 C
Belagavi
Thursday, September 29, 2022
spot_img

ಮೇ 16 ರಿಂದಲೇ ಶಾಲೆಗಳು ಆರಂಭ : ಸಚಿವ ಬಿ.ಸಿ.ನಾಗೇಶ್ 

spot_img

ಬೆಂಗಳೂರು : ಶಾಲೆಗಳ ಬೇಸಿಗೆ ರಜೆ ವಿಸ್ತರಣೆಗೆ ಸಂಬಂಧಿಸಿದಂತೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಹತ್ವದ ಹೇಳಿಕೆ ನೀಡಿದ್ದಾರೆ. ಮೇ 16 ರಿಂದಲೇ ಶೈಕ್ಷಣಿಕ ವರ್ಷವನ್ನು ಪ್ರಾರಂಭಿಸಲು ಶಿಕ್ಷಣ ಇಲಾಖೆ ನಿರ್ಧರಿಸಲಾಗಿದೆ. ಅಂದಿನಿಂದಲೇ ಕಲಿಕಾ ಚೇತರಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾದಿಂದ ಕಳೆದ ಎರಡೂವರೆ ವರ್ಷಗಳಿಂದ ಭೌತಿಕ ತರಗತಿಗಳು ನಡೆದಿಲ್ಲ. ಇದರಿಂದ ವಿದ್ಯಾರ್ಥಿಗಳು ಸಹ ಶೈಕ್ಷಣಿಕವಾಗಿ ಹಿಂದುಳಿದಿದ್ದಾರೆ. ಹೀಗಾಗಿ ಮೇ. 16 ರಿಂದಲ ಭೌತಿಕ ತರಗತಿಗಳನ್ನು ಆರಂಭಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

ಮುಂದುವರಿದು ಮಾತನಾಡಿ ಬಿಸಿಲು ಹೆಚ್ಚಾಗಿರುವ ಭಾಗಗಳಲ್ಲಿ ಶಾಲೆಗಗಳ ರಜೆ ಮುಂದುವರೆಸುವಂತೆ ಪಾಲಕರು ಮನವಿ ಮಾಡಿಲ್ಲ. ರಜೆ ದಿನಾಂಕವನ್ನು ಮುಂದೂಡುವ ಬಗ್ಗೆ ಯೋಚನೆ ಮಾಡಿಲ್ಲ ಎಂದರು.

spot_img

Related News

ಡಿ.ಕೆ.ಶಿವಕುಮಾರ್ ಮನೆ, ಕಚೇರಿ ಮೇಲೆ ಸಿಬಿಐ ದಾಳಿ

ಬೆಂಗಳೂರು: ಇಡಿ ಅಧಿಕಾರಿಗಳ ದಾಳಿಯ ಬಳಿಕ ವಿಚಾರಣೆ ಎದುರಿಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಕೇಂದ್ರ ತನಿಖಾ ದಳದ ಅಧಿಕಾರಿಗಳು ಡಿ ಕೆ ಶಿವಕುಮಾರ್...

ಮೂರು ಪಡೆಗಳ ಮುಖ್ಯಸ್ಥರಾಗಿ ಅನಿಲ್ ಚವ್ಹಾಣ್ ನೇಮಕ

ನವದೆಹಲಿ: ನಿವೃತ್ತ ಲೆಫ್ಟಿನೆಂಟ್ ಜನರಲ್ ಅನಿಲ್ ಚವ್ಹಾಣ್ ಅವರನ್ನು ನೂತನ ಸಿಡಿಎಸ್ ಆಗಿ ನೇಮಕ ಮಾಡಲಾಗಿದೆ. ಎರಡನೇ ಸಿಡಿಎಸ್ ಅನಿಲ್ ಚವ್ಹಾಣ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -