ಬೆಂಗಳೂರು: ರಾಜ್ಯದ ಹತ್ತು ಮಹಾನಗರ ಪಾಲಿಕೆಗಳ ಮೇಯರ್ ಮತ್ತು ಉಪಮೇಯರ್ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಸರ್ಕಾರ ಮೀಸಲಾತಿ ಪಟ್ಟಿ ಪ್ರಕಟಿಸಿದೆ.
ಬಳ್ಳಾರಿ, ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ-ಧಾರವಾಡ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ತುಮಕೂರು, ವಿಜಯಪುರ ಮಹಾನಗರ ಪಾಲಿಕೆಗಳ ಮೇಯರ್ ಮತ್ತು ಉಪಮೇಯರ್ ಆಯ್ಕೆಗೆ ರಾಜ್ಯಸರ್ಕಾರ ಮೀಸಲಾತಿ ಪಟ್ಟಿಯನ್ನು ಪ್ರಕಟಿಸಿದೆ.