spot_img
spot_img
spot_img
21.1 C
Belagavi
Friday, September 30, 2022
spot_img

ಬೆಳಗಾವಿ ಮಹಾನಗರ ಪಾಲಿಕೆ ರಾಜ್ಯದಲ್ಲೇ ಮಾದರಿ ಆಗಬೇಕು: ಆಯುಕ್ತ ರುದ್ರೇಶ ಗಾಳಿ

spot_img

ಬೆಳಗಾವಿ: ತಂಬಾಕು ಮುಕ್ತ ಸಮಾಜಕ್ಕೆ ಎಲ್ಲರೂ ಕೈ ಜೋಡಿಸಲು ಹಾಗೂ ಕೊಟ್ಪಾ 2003ರ ಕಾಯ್ದೆಯ ಪರಿಣಾಮಕಾರಿ ಅನುಷ್ಠಾನಗೊಳಿಸಿ ಬೆಳಗಾವಿ ಮಹಾನಗರ ಪಾಲಿಕೆಯನ್ನು ರಾಜ್ಯದಲ್ಲೇ ಮಾದರಿ ಮಹಾನಗರ ಪಾಲಿಕೆ ಮಾಡುವಲ್ಲಿ ಎಲ್ಲಾ ಅಧಿಕಾರಿಗಳು ಕೈಜೋಡಿಸಬೇಕು ಎಂದು ಮಹಾನಗರ ಪಾಲಿಕೆಯ ಆಯುಕ್ತರಾದ ಡಾ.ರುದ್ರೇಶ ಗಾಳಿ ಅವರು ಹೇಳಿದರು.

ಮಹಾನಗರ ಪಾಲಿಕೆಯ ಆಧಿಕಾರಿ ಹಾಗೂ ಸಿಬ್ಬಂದಿಗಳಿಗೆ ತಂಬಾಕು ಉತ್ಪನ್ನಗಳ ಮಾರಾಟ, ಉದ್ಯಮ ಪರವಾನಗಿ ಅನುಷ್ಠಾನದ ಕುರಿತಾಗಿ ಪಾಲಿಕೆ ಸಂಭಾಂಗಣದಲ್ಲಿ ಶುಕ್ರವಾರ ನಡೆದ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಯುವ ಸಮುದಾಯವೂ ಹೆಚ್ಚಾಗಿ ತಂಬಾಕಿನ ದಾಸರಾಗುತ್ತಿರುವುದಕ್ಕೆ ಕಳವಳ ವ್ಯಕ್ತಪಡಿಸಿದರು.

ತಂಬಾಕು ಸೇವನೆಯಿಂದ ವಿಪರೀತ ಸಾವು, ನೋವುಗಳು ಸಂಭವಿಸುತ್ತಿವೆ. ದೇಶ ಅಷ್ಟೇ ಅಲ್ಲೇ ಜಾಗತಿಕ ಮಟ್ಟದಲ್ಲಿ ತಂಬಾಕು ಸೇವನೆ ದೊಡ್ಡ ಪಿಡುಗಾಗಿ ಮಾರ್ಪಟ್ಟಿದೆ. ಹೀಗಾಗಿ ಸಮಾಜವನ್ನು ತಂಬಾಕು ಮುಕ್ತಗೊಳಿಸುವುದಕ್ಕಾಗಿ ಎಲ್ಲರೂ ಒಟ್ಟಾಗಬೇಕಾಗಿದೆ ಎಂದು ಕರೆ ಕೊಟ್ಟರು.

ಮಹಾನಗರ ಪಾಲಿಕೆ ಬೆಳಗಾವಿಯ ಮುಖ್ಯ ಆರೋಗ್ಯಾಧಿಕಾರಿಗಳಾದ . ಡಾ. ಸಂಜಯ ದುಂಮ್ಮಗೋಳ ಇವರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಉದ್ಯಮ ಪರವಾನಿಗೆ ಅನುಷ್ಠಾನ ಗೋಳಿಸಲು ಎಲ್ಲ ರೀತಿಯ ಕ್ರಮಗಳನ್ನು ಕೈಗೋಳ್ಳುವುದಾಗಿ ತಿಳಿಸಿದರು.

ಕಾರ್ಯಾಗಾರದಲ್ಲಿ ಮಹಾನಗರ ಪಾಲಿಕೆಯ ಎಲ್ಲ ಆರೋಗ್ಯ ನಿರೀಕ್ಷಕರು ಸ್ಯಾನಿಟರಿ ಸೂಪರ್ವೈಜರ್ ಹಾಗೂ ಇತರ ಅಧಿಕಾರಿಗಳು ಭಾಗವಹಿಸಿದ್ದರು. ಈ ಕಾರ್ಯಕ್ರಮದ ನಿರೂಪಣೆಯನ್ನು ಕವಿತಾ ರಾಜನ್ನವರ ನಡೆಸಿದರು. ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯ ಇತರೆ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

spot_img

Related News

ಇಂದು ರಾಜ್ಯಕ್ಕೆ ಭಾರತ್ ಜೋಡೋ ಯಾತ್ರೆ

ಚಾಮರಾಜನಗರ : ರಾಹುಲ್ ಗಾಂಧಿ ನೇತೃತ್ವದಲ್ಲಿ ದೇಶಾದ್ಯಂತ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆ ಇಂದು ರಾಜ್ಯಕ್ಕೆ ಆಗಮಿಸಲಿದ್ದು, ಬರಮಾಡಿಕೊಳ್ಳಲು ಕಾಂಗ್ರೆಸ್ ತಯಾರಿ ಜೋರಾಗಿದೆ. ನಾಯಕರನ್ನು ಸ್ವಾಗತಿಸಲು ರಾಜ್ಯ ಕಾಂಗ್ರೆಸ್‌ ನಾಯಕರು ಸರ್ವ ರೀತಿಯಲ್ಲೂ...

ಪ್ರತಿ ಇನ್ಸಸ್ಟಾಗ್ರಾಂ ಪೋಸ್ಟ್ ಗೆ 8 ಕೋಟಿ ರೂ. ಪಡೆಯುವ ವಿರಾಟ್ ಕೊಹ್ಲಿ

ನವದೆಹಲಿ: ವಿರಾಟ್​ ಕೊಹ್ಲಿ ಸಾಮಾಜಿಕ ಜಾಲತಾಣ ಇನ್​ಸ್ಟಾಗ್ರಾಂನಲ್ಲೂ ಹೊಸ ದಾಖಲೆ ಬರೆದಿದ್ದಾರೆ. ಇನ್​ಸ್ಟಾಗ್ರಾಂನಲ್ಲಿ ಅವರು ಪ್ರತಿ ಪ್ರಾಯೋಜಿತ ಪೋಸ್ಟ್​ಗೆ ಬರೋಬ್ಬರಿ 8 ಕೋಟಿ ರೂಪಾಯಿ ಚಾರ್ಜ್​ ಮಾಡುತ್ತಿದ್ದಾರೆ. ಈ ಮೂಲಕ ಇನ್​ಸ್ಟಾಗ್ರಾಂನಲ್ಲಿ ಗರಿಷ್ಠ ಹಣ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -