ಬೆಂಗಳೂರು: ಗಡಿ ವಿವಾದದ ನಡುವೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಳಗಾವಿ ಜಿಲ್ಲಾ ಪ್ರವಾಸಕ್ಕೆ ಅಣಿಯಾಗಿದ್ದಾರೆ.
ವಿವಿಧ ಕಾಮಗಾರಿಗಳ ಶಿಲಾನ್ಯಾಸ ಮತ್ತು ಉದ್ಘಾಟನಾ ಕಾರ್ಯಕ್ರಮ ನೆರವೇರಿಸುವುದರ ಮೂಲಕ ಮಹಾರಾಷ್ಟ್ರ ಸರ್ಕಾರಕ್ಕೆ ಬಿಸಿ ಮುಟ್ಟಿಸಲಿದ್ದಾರೆ.
ರಾಮದುರ್ಗ ತಾಲ್ಲೂಕಿನ ದೊಡಮಂಗಡಿ ತಲುಪಲಿದ್ದಾರೆ. ಅಲ್ಲಿ ಮೊದಲ ಕಾರ್ಯಕ್ರಮ ಆಯೋಜನೆಗೊಂಡಿದ್ದು, ಬಸವೇಶ್ವರ ವೃತ್ತದಲ್ಲಿ ನಿರ್ಮಿಸಿರುವ ಬಸವೇಶ್ವರರ ಕಂಚಿನ ಪುತ್ಥಳಿ ಅನಾವರಣ ಮಾಡಲಿದ್ದಾರೆ.
ಈ ಕಾರ್ಯಕ್ರಮದ ನಂತರ ಡಾ.ಶ್ಯಾಮ ಪ್ರಸಾದ್ ಮುಖರ್ಜಿ ವೇದಿಕೆಯಲ್ಲಿ ಆಯೋಜನೆ ಮಾಡಿರುವ ರಾಮದುರ್ಗ ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಮತ್ತು ಉದ್ಘಾಟನೆ ನೆರವೇರಿಸಲಿದ್ದಾರೆ.