ಸಾರ್ವಜನಿಕರ ಸಮಸ್ಯೆಗಳನ್ನು ಸ್ಥಳೀಯವಾಗಿ ಪರಿಹರಿಸುವ ಉದ್ಧೇಶದಿಂದ ಬೆಳಗಾವಿ ಜಿಲ್ಲೆಯ ಬೈಲಹೊಂಗಲದಲ್ಲಿ ಆಯೋಜಿಸಲಾಗಿರುವ “ಜನತಾದರ್ಶನ್” ಕಾರ್ಯಕ್ರಮದಲ್ಲಿ ಭಾಗವಹಿಸಲು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರ ನೇತೃತ್ವದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳು ಸಾರಿಗೆ ಸಂಸ್ಥೆಯ ಬಸ್ ನಲ್ಲಿ ಪ್ರಯಾಣಿಸಿದರು.
ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೋಯರ್, ಅಪರ ಜಿಲ್ಲಾಧಿಕಾರಿ ವಿಜಯಕುಮಾರ್ ಹೊನಕೇರಿ, ಪಾಲಿಕೆಯ ಆಯುಕ್ತರಾದ ಅಶೋಕ ದುಡಗುಂಟಿ ಮತ್ತಿತರರು ಟಿಕೆಟ್ ಪಡೆದುಕೊಂಡು ಬಸ್ ನಲ್ಲಿ ಪ್ರಯಾಣಿಸಿದರು.