spot_img
spot_img
spot_img
18.5 C
Belagavi
Thursday, September 29, 2022
spot_img

ಬಳ್ಳಾರಿ ನಾಲಾ ಸೇತುವೆ ಕಾಮಗಾರಿ ಪರಿಶೀಲಿಸಿದ ಶಾಸಕ ಬೆನಕೆ

spot_img

ಬೆಳಗಾವಿ : ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆರವರು ಬಸವಣ ಕುಡಚಿ ಹಾಗೂ ಸುತ್ತಮುತ್ತಲಿನ ರೈತರ ಬಹು ವರ್ಷಗಳ ಬೇಡಿಕೆಯಾದ ಬಳ್ಳಾರಿ ನಾಲಾದ ಸೇತುವೆ ನಿರ್ಮಾಣ ಕಾಮಗಾರಿಯನ್ನು ಕೈಗೊಳ್ಳಲು ಕಳೆದ ಒಂದು ತಿಂಗಳ ಹಿಂದೆ ಭೂಮಿ ಪೂಜೆಯನ್ನು ಸಲ್ಲಿಸಿ ಕಾಮಗಾರಿಗೆ ಚಾಲನೆ ನೀಡಲಾಗಿತ್ತು.

ಅದರಂತೆಯೇ ಇಂದು ಸೇತುವೆ ನಿರ್ಮಾಣ ಕಾಮಗಾರಿಯನ್ನು ಪರಿಶೀಲನೆ ನಡೆಸಲಾಗಿದ್ದು, ನಿಗದಿತ ಅವಧಿಯಲ್ಲಿ ಸೇತುವೆ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಲಾಗಿದೆ. ಇನ್ನುಳಿದ ಸಣ್ಣಪುಟ್ಟ ಕಾರ್ಯಗಳು ಬಾಕಿ ಇದ್ದು, ಬರುವ ದಿನಗಳಲ್ಲಿ ಆ ಕೆಲಸಗಳನ್ನು ಸಹ ಪೂರ್ಣಗೊಳಿಸಲಾಗುತ್ತದೆ ಎಂದರು.

ಬೆಳಗಾವಿಯಲ್ಲಿನ ರೈತರ ಹಿತರಕ್ಷಣೆಯನ್ನು ಕಾಪಾಡುವಲ್ಲಿ ಸತತ ಪ್ರಯತ್ನವನ್ನು ನಡೆಸಲಾಗುತ್ತಿದ್ದು, ಬಸವಣಕುಡಚಿ ಹಾಗೂ ಸುತ್ತಮುತ್ತಲಿನ ರೈತರ ಬಹುವರ್ಷಗಳ ಬೇಡಿಕೆಯು ಇಂದು ನನಸಾಗಿದೆ ಆದ್ದರಿಂದ ಇಲ್ಲಿನ ರೈತರಿಗೆ ಇದರಿಂದ ಅನುಕೂಲಕರವಾಗಿದೆ ಎಂದರು.

ಇಲ್ಲಿನ ರೈತರು ಸೇತುವೆಯ ಸದುಪಯೋಗವನ್ನು ಪಡೆದುಕೊಳ್ಳಬೇಕು, ಯಾವುದೇ ಸಮಸ್ಯೆಗಳಿದ್ದರೂ ಸಂಪರ್ಕಿಸುವಂತೆ ತಿಳಿಸಿದರು.ಈ ಸಂದರ್ಭದಲ್ಲಿ ಶಾಸಕರೊಂದಿಗೆ ಬಸವಣಕುಡಚಿ ರೈತರು ಹಾಗೂ ಇತರರು ಉಪಸ್ಥಿತರಿದ್ದರು.

spot_img

Related News

ಡಿ.ಕೆ.ಶಿವಕುಮಾರ್ ಮನೆ, ಕಚೇರಿ ಮೇಲೆ ಸಿಬಿಐ ದಾಳಿ

ಬೆಂಗಳೂರು: ಇಡಿ ಅಧಿಕಾರಿಗಳ ದಾಳಿಯ ಬಳಿಕ ವಿಚಾರಣೆ ಎದುರಿಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಕೇಂದ್ರ ತನಿಖಾ ದಳದ ಅಧಿಕಾರಿಗಳು ಡಿ ಕೆ ಶಿವಕುಮಾರ್...

ಮೂರು ಪಡೆಗಳ ಮುಖ್ಯಸ್ಥರಾಗಿ ಅನಿಲ್ ಚವ್ಹಾಣ್ ನೇಮಕ

ನವದೆಹಲಿ: ನಿವೃತ್ತ ಲೆಫ್ಟಿನೆಂಟ್ ಜನರಲ್ ಅನಿಲ್ ಚವ್ಹಾಣ್ ಅವರನ್ನು ನೂತನ ಸಿಡಿಎಸ್ ಆಗಿ ನೇಮಕ ಮಾಡಲಾಗಿದೆ. ಎರಡನೇ ಸಿಡಿಎಸ್ ಅನಿಲ್ ಚವ್ಹಾಣ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -