ಬೆಳಗಾವಿ : ಬೆಳಗಾವಿಯ ರಾಮತೀರ್ಥ ನರದಲ್ಲಿನ ಕರ್ನಾಟಕ ಪಬ್ಲಿಕ ಶಾಲೆಯಲ್ಲಿ ಆಯೋಜಿಸಲಾದ 10 ನೇ ತರಗತಿ ವಿದ್ಯಾರ್ಥಿಗಳ ಬಿಳ್ಕೋಡುಗೆ ಸಮಾರಂಭವು ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆರವರ ಅಧ್ಯಕ್ಷತೆಯಲ್ಲಿ ಜರುಗಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳಿಗೆ ಮುಂದೆ ಬರುವ ಪರೀಕ್ಷೆಗಳ ತಯಾರಿ ಕುರಿತು ತಿಳಿಸಿದರಲ್ಲದೆ ಎಲ್ಲ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿ ತಮ್ಮ ಮುಂದಿನ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕೆಂದು ಶುಭಾಷಯಗಳನ್ನು ಕೋರಿದರು.
ಈ ಸಂದರ್ಭದಲ್ಲಿ ನಗರ ಸೇವಕ ಹಣಮಂತ ಕೊಂಗಾಲಿ, ಸಮಾಜ ಸೇವಕ ಸುರೇಶ ಯಾಧವ, ಮುಖ್ಯ ಗುರುಗಳಾದ ಹಿರೇಮಠ ಹಾಗೂ ಶಾಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.