spot_img
spot_img
spot_img
18 C
Belagavi
Thursday, September 29, 2022
spot_img

ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿದ ಶಾಸಕ ಬೆನಕೆ

spot_img

ಬೆಳಗಾವಿ : ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ನಿಮಿತ್ಯ ಇಂದು ಲಿಂಗಾಯತ ಸಂಘಟನೆ ಬೆಳಗಾವಿ ಇವರ ಆಶ್ರಯದಲ್ಲಿ ನಗರದ ಹಳಕಟ್ಟಿ ಭವನದಲ್ಲಿ ವಿಶ್ವ ಮಹಿಳಾ ದಿನವನ್ನು ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆರವರು ಮಹಾನಗರ ಪಾಲಿಕೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಪೌರ ಕಾರ್ಮಿಕರನ್ನು ಸನ್ಮಾನಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ನಮ್ಮ ದೈನಂದಿನ ಹಾಗೂ ಎಲ್ಲ ಕ್ಷೇತ್ರಗಳಲ್ಲಿ ಮಹಿಳೆಯರ ಪಾತ್ರ ಹಿರಿದಾಗಿದೆ. ಸಮಾಜವನ್ನು ತಿದ್ದುವಲ್ಲಿ ಮಹಿಳೆಯರು ಸಶಕ್ತರಾಗಿದ್ದು, ನಮ್ಮ ಭಾರತ ದೇಶದಲ್ಲಿ ಮಹಿಳೆಯರನ್ನು ದೈವಿ ರೂಪದಲ್ಲಿ ಕಾಣಲಾಗುತ್ತದೆ ಎಂದರು.

ಸಮಾಜದಲ್ಲಿ ಮಹಿಳೆಯರಿಗೆ ವಿಶೇಷ ಸ್ಥಾನವನ್ನು ಕಲ್ಪಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಹಿಳೆಯರ ಸ್ವಾವಲಂಭನೆ ಹಾಗೂ ಸಬಲೀಕರಣಕ್ಕಾಗಿ ಅನೇಕ ವಿನೂತನ ಕಾರ್ಯಕ್ರಮಗಳನ್ನು ರೂಪಿಸಿವೆ ಅವುಗಳನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಕರೆ ನೀಡಿದರು. ಭಾರತ ಭೂಮಿಯಲ್ಲಿ ಮಹಿಳೆಯರು ಎಂದಿಗೂ ಪೂಜ್ಯನೀಯ ಸ್ಥಾನದಲ್ಲಿದ್ದಾರೆ ಎಂದು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ದಾನಮ್ಮ ಜಳಕಿ, ಗುರುದೇವಿ ಹೂಲೆಪ್ಪನ್ನವರ, ನೇತ್ರಾ ರಾಮಾಪೂರೆ, ವಿದ್ಯಾ ಅಜಗಾಂವಕರ, ಮಹಿಳಾ ಪೌರಕಾರ್ಮಿಕರು ಹಾಗೂ ಇತರರು ಉಪಸ್ಥಿತರಿದ್ದರು.

spot_img

Related News

ಡಿ.ಕೆ.ಶಿವಕುಮಾರ್ ಮನೆ, ಕಚೇರಿ ಮೇಲೆ ಸಿಬಿಐ ದಾಳಿ

ಬೆಂಗಳೂರು: ಇಡಿ ಅಧಿಕಾರಿಗಳ ದಾಳಿಯ ಬಳಿಕ ವಿಚಾರಣೆ ಎದುರಿಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಕೇಂದ್ರ ತನಿಖಾ ದಳದ ಅಧಿಕಾರಿಗಳು ಡಿ ಕೆ ಶಿವಕುಮಾರ್...

ಮೂರು ಪಡೆಗಳ ಮುಖ್ಯಸ್ಥರಾಗಿ ಅನಿಲ್ ಚವ್ಹಾಣ್ ನೇಮಕ

ನವದೆಹಲಿ: ನಿವೃತ್ತ ಲೆಫ್ಟಿನೆಂಟ್ ಜನರಲ್ ಅನಿಲ್ ಚವ್ಹಾಣ್ ಅವರನ್ನು ನೂತನ ಸಿಡಿಎಸ್ ಆಗಿ ನೇಮಕ ಮಾಡಲಾಗಿದೆ. ಎರಡನೇ ಸಿಡಿಎಸ್ ಅನಿಲ್ ಚವ್ಹಾಣ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -