ನವದೆಹಲಿ: ಹೊಸ ವರ್ಷದ ಮೊದಲ ದಿನದಂದು ತೈಲ ಮಾರುಕಟ್ಟೆ ಕಂಪನಿಗಳುಎಲ್ಪಿಜಿ ಸಿಲಿಂಡರ್‌ನ ಬೆಲೆಯನ್ನು ಹೆಚ್ಚಿಸುವ ಮೂಲಕ ಗ್ರಾಹಕರಿಗೆ ದೊಡ್ಡ ಶಾಕ್ ನೀಡಿವೆ.
ವಾಣಿಜ್ಯ ಸಿಲಿಂಡರ್‌ಗಳ ಬೆಲೆಯನ್ನು 25 ರೂಪಾಯಿವರೆಗೆ ಹೆಚ್ಚಿಸಲಾಗಿದೆ. ಆದರೆ ಗೃಹಬಳಕೆಯ ಸಿಲಿಂಡರ್ ಗಳ ದರಗಳನ್ನು ಬದಲಾವಣೆ ಮಾಡಿಲ್ಲ.
ಜನವರಿ 1, 2023 ರಿಂದ ಅನ್ವಯವಾಗುವಂತೆ ವಾಣಿಜ್ಯ ಸಿಲಿಂಡರ್‌ಗಳ ದರವನ್ನು 25 ರೂ.ವರೆಗೆ ಹೆಚ್ಚಿಸುವ ಮೂಲಕ ಬದಲಾಯಿಸಿವೆ. ಈ ಮೂಲಕ ರೆಸ್ಟೋರೆಂಟ್ಗಳು, ಹೋಟೆಲ್ಗಳು ಇತ್ಯಾದಿಗಳಲ್ಲಿ ಊಟ, ತಿಂಡಿ ದರ ದುಬಾರಿಯಾಗಿಸುತ್ತದೆ.