ಬೆಂಗಳೂರು: ರಾಜ್ಯ ಸರ್ಕಾರದ ವೈಫಲ್ಯ ವಿರುದ್ಧ ಪ್ರತಿಭಟನೆ ನಡೆಸಲು ನಿರ್ಧಿರಿಸಿದ್ದೇವೆ. ನಾಡಿದ್ದು ಸಾವಿರಾರು ಕಾರ್ಯಕರ್ತರ ಜತೆ ಪ್ರತಿಭಟನೆ ನಡೆಸುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿದ ಅವರು ಗ್ಯಾರಂಟಿ ಅನುಷ್ಠಾನದ ಬಗ್ಗೆ ಬಿಜೆಪಿಯಿಂದ ಪ್ರತಿಭಟನೆ ನಡೆಸುತ್ತೇವೆ. ಪ್ರತಿಭಟನೆಯಲ್ಲಿ ನಾನು ಕೂಡ ಭಾಗಿಯಾಗುತ್ತೇನೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ದೆಹಲಿಗೆ ಬರಲು ಹೇಳಿದ್ದಾರೆ. ವಿಷಯ ಏನು ಅಂತ ಗೊತ್ತಿಲ್ಲ. ಹೋಗಿ ಮಾತಾಡಿ ಸಾಧ್ಯ ಆದರೆ ಇಂದೇ ಬರುತ್ತೇನೆ. ನಾಡಿದ್ದು ಸಾವಿರಾರು ಸಂಖ್ಯೆಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ಹೀಗಾಗಿ ಅದರಲ್ಲಿ ಭಾಗವಹಿಸಬೇಕು ಎಂದರು.
ಬೆಳಗಾವಿ : 2023ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಬೆಳಗಾವಿ ಜಿಲ್ಲೆಯ 14 ಗ್ರಾಮ ಪಂಚಾಯತಿಗಳು ಆಯ್ಕೆಯಾಗಿದ್ದು ಜಿಲ್ಲಾ ಪಂಚಾಯತ್ ಕಾರ್ಯಾಲಯ ಈ ಕುರಿತು ಆದೇಶ ನೀಡಿದೆ.
ಖಾನಾಪುರ – ಬೇಕವಾಡ, ಕಿತ್ತೂರು –...
ಬೆಂಗಳೂರು: ಚಂದ್ರಯಾನ-3 ಅಭೂತಪೂರ್ವ ಯಶಸ್ಸಿನ ಬಳಿಕ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಇಂದು ಮತ್ತೊಂದು ಸಾಹಸಕ್ಕೆ ಮುಂದಾಗಿದ್ದು 15 ದಿನಗಳ ಹಿಂದೆ ಚಂದ್ರನಲ್ಲಿ ರಾತ್ರಿಯಾದ ಕಾರಣ ನಿದ್ರೆಗೆ ಜಾರಿಸಿದ್ದ ವಿಕ್ರಮ್ ಲ್ಯಾಂಡರ್ ಮತ್ತು...