spot_img
spot_img
spot_img
22.1 C
Belagavi
Sunday, September 25, 2022
spot_img

ಬಿಜೆಪಿ ಸರ್ಕಾರದಲ್ಲಿ ಸಚಿವರಾಗಲು ದುಡ್ಡು ಕೊಡಬೇಕು ನೌಕ್ರಿ ಹಿಡಿಯಬೇಕಾದ್ರು ದುಡ್ಡು ಕೊಡಬೇಕು :ವಿನಯ್ ನವಲಗಟ್ಟಿ 

spot_img
spot_img

For Breaking News Download App

ಬೆಳಗಾವಿ : ರಾಜ್ಯದಲ್ಲಿನ ಬಿಜೆಪಿ ಪಕ್ಷದ ಸರ್ಕಾರ ಹಗರಣಗಳ ಸುಳಿಗಳು ಏರಿಕೆಯಾಗುತ್ತಲೇ ಇದೆ ಎಂದು ಕಾಂಗ್ರೆಸ್ ಗ್ರಾಮೀಣ ಭಾಗದ ಅಧ್ಯಕ್ಷರಾದ ವಿನಯ ನವಲಗಟ್ಟಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಬೆಳಗಾವಿಯಲ್ಲಿ ಪಂಚಾಯತ್ ಸ್ವರಾಜ್ ಸಮಾಚಾರ ಪತ್ರಿಕೆ ಯೊಂದಿಗೆ ಮಾತನಾಡಿದ ಅವರು ಒಂದು ಕಡೆ ಭ್ರಷ್ಟಾಚಾರ 40 ಪರ್ಸೆಂಟ್ ಮತ್ತೊಂದು ಕಡೆ ಪಿಎಸ್ಐ ನೇಮಕಾತಿ ಹಗರಣಗಳನ್ನು ಕಂಡು ಜನ ಕಂಗಾಲಾಗಿದ್ದಾರೆ. ವಿಜಯಪುರದ ಶಾಸಕರಾದ ಬಸವರಾಜ್ ಪಾಟೀಲ್ ಯತ್ನಾಳ್ ಅವರು 2500 ಸಾವಿರ ಕೋಟಿ ಹಣ ನೀಡಿದರೆ ನಾನು ಮುಖ್ಯಮಂತ್ರಿ ಆಗಬಹುದು ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಯತ್ನಾಳ್ ಅವರ ಹೇಳಿಕೆ ಅಲ್ಲಗಳೆಯಲು ಸಾಧ್ಯವಿಲ್ಲ, ಸರ್ಕಾರ ಸಂಪೂರ್ಣವಾಗಿ ಭ್ರಷ್ಟಾಚಾರದಲ್ಲಿ ತೊಡಗಿದ್ದು ಮಂತ್ರಿ ಯಾಗಬೇಕಾದರೆ ದುಡ್ಡು ಕೊಡಬೇಕು, ನೌಕರಿ ಹಿಡಿಯಬೇಕಾದರೆ ದುಡ್ಡು ಕೊಡಬೇಕು. ಸರ್ಕಾರವೇ ಮಾರಾಟಕ್ಕಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪಂಚಮಸಾಲಿ 2ಎ ಮೀಸಲಾತಿ ನೀಡಬೇಕೆಂದು ಹೋರಾಟ ಬಹುದಿನಗಳಿಂದ ನಡೆಯುತ್ತದೆ. ಮೀಸಲಾತಿ ಹೋರಾಟಕ್ಕೆ ಹಿನ್ನಡೆ ಉಂಟಾಗುತ್ತಿದೆ ಅದಕ್ಕೆ ಕಾರಣ ಧಾರವಾಡ ಶಾಸಕರಾದ ಅರವಿಂದ ಬೆಲ್ಲದ ಅವರು ಮುಖ್ಯಮಂತ್ರಿಗಳಿಗೆ ಮೀಸಲಾತಿ ನೀಡಬಾರದೆಂದು ಕಿವಿಮಾತು ಹೇಳುತ್ತಿದ್ದಾರೆ ಆಕ್ರೋಶ ವ್ಯಕ್ತಪಡಿಸಿದರು.

ಈ ಹೋರಾಟ ನಿನ್ನೆ ಮೊನ್ನೆಯದಲ್ಲ ಕೆಲ ನಾಯಕರು ರೀತಿ ಹೇಳಿಕೆಯಿಂದಾಗಿ ಹೋರಾಟಕ್ಕೆ ಹಿನ್ನಡೆ ಉಂಟಾಗಲಿದೆ. ಅದಕ್ಕೆ ಯಾವುದೇ ರೀತಿಯ ವಿವಾದಾತ್ಮಕ ಹೇಳಿಕೆಗಳನ್ನು ನೀಡಬಾರದು ಎಂದು ವಿನಯ ನವಲಗಟ್ಟಿ ತಮ್ಮ ನಾಯಕರುಗಳಿಗೆ ಮನವಿ ಮಾಡಿಕೊಂಡರು.

For Breaking News Download App

Related News

ನನಗೆ ಭಾಷೆ – ಜಾತಿ ಇಲ್ಲ, ಜನರ ಪ್ರೀತಿ ಒಂದೇ : ಶಾಸಕಿ ಅಂಜಲಿ ನಿಂಬಾಳ್ಕರ್ 

ವರದಿ : ರತ್ನಾಕರ ಗೌಂಡಿ  ಬೆಳಗಾವಿ : ಖಾನಾಪುರ್ ಪಟ್ಟಣದಲ್ಲಿ ಅಂಜಲಿ ನಿಂಬಾಳ್ಕರ್ ನೇತೃತ್ವದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹಾಗೂ ಮಹಾರಾಷ್ಟ್ರ ಏಕೀಕರಣ ಸಮಿತಿಯ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ 60...

ಬೆಳಗಾವಿ : ಭೀಕರ ಅಪಘಾತದಲ್ಲಿ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವು 

ಬೆಳಗಾವಿ: ಕಾರು ಮತ್ತು ಬೈಕ್​ಗೆ, ಲಾರಿ ಡಿಕ್ಕಿ ಹೊಡೆದ ಪರಿಣಾಮ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಬೂದಿಗೊಪ್ಪ ಕ್ರಾಸ್​ನಲ್ಲಿ ನಡೆದಿದೆ. ರುಕ್ಮಿಣಿ ಹಳಕಿ(48) ಅಕ್ಷತಾ ಹಳಕಿ(22), ಕಾರು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -