ಬೆಳಗಾವಿ : ಇತ್ತೀಚೆಗೆ ನಿಧನರಾದ ವಿಧಾನಸಭೆ ಉಪಸಭಾಧ್ಯಕ್ಷ, ಶಾಸಕ ಆನಂದ ಮಾಮನಿ ಅವರ ಪತ್ನಿ ರತ್ನಾ ಅವರಿಗೆ ಬಿಜೆಪಿ ಟಿಕೆಟ್ ನೀಡುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.
ರಾಮದುರ್ಗ ತಾಲ್ಲೂಕಿನ ದೊಡ್ಡಮಂಗಡಿಯಲ್ಲಿ ಬಸವೇಶ್ವರರ ಪುತ್ಥಳಿ ಅನಾವರಣ ಮಾಡಿದ ಬಳಿಕ ರತ್ನಾ ಮಾಮನಿ ಅವರೊಂದಿಗೆ ಮಾತನಾಡಿದ ಬೊಮ್ಮಾಯಿ , ನಿಮ್ಮ ವಿಚಾರವಾಗಿ ದೆಹಲಿಯಲ್ಲಿ ಮಾತನಾಡಿದ್ದೇನೆ.
ಕಾಳಜಿ ಮಾಡಬೇಡಿ ಎಂದಿದ್ದಾರೆ. ಈ ಮೂಲಕ ಸವದತ್ತಿ ದಿವಂಗತ ಆನಂದ ಮಾಮನಿ ಅವರ ಪತ್ನಿ ರತ್ನಾ ಅವರಿಗೆ ಟಿಕೆಟ್ ನೀಡುವ ಸುಳಿವು ನೀಡಿದ್ದಾರೆ.