ನವದೆಹಲಿ: 200 ಕೋಟಿ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ನಟಿ ಅವರಿಗೆ ದೆಹಲಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ನವೆಂಬರ್ 11ರಂದು ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಾಲಯ ಜಾಮೀನು ಅರ್ಜಿಯ ಆದೇಶವನ್ನು ನವೆಂಬರ್ 15ಕ್ಕೆ ಮುಂದೂಡಿತ್ತು.ನ್ಯಾಯಾಲಯವು ಜಾಕ್ವೆಲಿನ್ ಫರ್ನಾಂಡಿಸ್ ಅವರ ಮಧ್ಯಂತರ ಜಾಮೀನು ಅವಧಿಯನ್ನು ವಿಸ್ತರಿಸಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿಯಿಂದ ಹಲವು ಬಾರಿ ಸಮನ್ಸ್ ಪಡೆದಿದ್ದ ಜಾಕ್ವೆಲಿನ್ ಅವರನ್ನು ಪೂರಕ ಚಾರ್ಜ್‌ಶೀಟ್‌ನಲ್ಲಿ ಇದೇ ಮೊದಲ ಬಾರಿಗೆ ಆರೋಪಿ ಎಂದು ಹೆಸರಿಸಲಾಗಿದೆ.
ಕಳೆದ ಡಿಸೆಂಬರ್‌ನಲ್ಲಿ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯಕ್ಕೆ ಇ.ಡಿ ತನ್ನ ಮೊದಲ ಚಾರ್ಜ್‌ಶೀಟ್ ಸಲ್ಲಿಸಿತ್ತು. ನಂತರ, ಫೆಬ್ರುವರಿಯಲ್ಲಿ ಸುರೇಶ್ ಚಂದ್ರಶೇಖರ್ ಅವರನ್ನು ಜಾಕ್ವೆಲಿನ್‌ಗೆ ಪರಿಚಯಿಸಿದ್ದ ಪಿಂಕಿ ಇರಾನಿ ಎಂಬುವವರ ವಿರುದ್ಧವೂ ಪೂರಕ ಚಾರ್ಜ್‌ಶೀಟ್ ಸಲ್ಲಿಸಿತ್ತು.