ಬೆಳಗಾವಿ: ಗಡಿ ವಿವಾದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಶಿವಸೇನೆ, ನವನಿರ್ಮಾಣ ಸೇನೆ ಕಾರ್ಯಕರ್ತರು ಮತ್ತೆ ಪುಂಡಾಟಿಕೆ ಮುಂದುವರೆಸಿದ್ದು, ಇದೀಗ ಗಡಿಯಲ್ಲಿ ಮತ್ತಷ್ಟು ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಮಹಾರಾಷ್ಟ್ರಕ್ಕೆ ತೆರಳುವ ಕೆಎಸ್ಆರ್ಟಿಸಿ ಬಸ್ಗಳ ಸಂಚಾರ ಸ್ಥಗಿತಗೊಳಿಸಲಾಗಿದೆ.
ಇನ್ನು ಮುಖ್ಯಮಂತ್ರಿ ಏಕನಾಥ್ ಶಿಂಧೆ, ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ದೂರವಾಣಿ ಕರೆ ಮಾಡಿ ಶಾಂತಿ ಮತ್ತು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಮನವಿ ಮಾಡಿದ್ದಾರೆ.
ನಿನ್ನೆ ರಾತ್ರಿ ಪುಣೆಯಿಂದ ಬೆಳಗಾವಿಗೆ ಬರುತ್ತಿದ್ದ ವೇಳೆ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಹಾರಾಷ್ಟ್ರದ ನವನಿರ್ಮಾಣ ಸೇನೆ ಕಾರ್ಯಕರ್ತರು ಕೆಎಸ್ ಆರ್ ಸಿ ಬಸ್ ತಡೆದು ಮಸಿ ಬಳಿದು, ಜೈ ಮಹಾರಾಷ್ಟ್ರ ಎಂದು ಘೋಷಣೆ ಕೂಗಿದ್ದಾರೆ.
ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಬಸ್ ಸಂಚಾರ ಬಂದ್ ಮಾಡಲಾಗಿದೆ.