ಬೆಂಗಳೂರು: ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾಲೀಕತ್ವದ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ದಾಳಿ ನಡೆಸಿದೆ. ರಾಜರಾಜೇಶ್ವರಿ ನಗರದಲ್ಲಿರುವ ನ್ಯಾಶನಲ್ ಎಜುಕೇಶನ್ ಫೌಂಡೇಶನ್ ಮೇಲೆ ದಾಳಿ ನಡೆದಿದೆ ಅಂತ ತಿಳಿದು ಬಂದಿದೆ.
ಈ ಹಿಂದೆ ಕೂಡ ಡಿ ಕೆ ಶಿವಕುಮಾರ್ ಅವರ ಮನೆ ಮೇಲೆ ಇಡಿ, ಆದಾಯ ತೆರಿಗೆ ಅಧಿಕಾರಿಗಳು, ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದು, ಅದಕ್ಕೆ ಸಂಬಂಧಪಟ್ಟಂತೆ ಅವರನ್ನು ಸದ್ಯ ವಿಚಾರಣೆ ನಡೆಸುತ್ತಿದೆ.
ಡಿಕೆ ಶಿವಕುಮಾರ್ ಅವರು ಸಂಸ್ಥೆಯ ಚೇರ್ಮನ್ ಆಗಿದ್ದು, ಅವರ ಮಗಳಾದ ಐಶ್ವರ್ಯ ಅವರು ಕಾರ್ಯದರ್ಶಿಯಾಗಿ ಆಗಿದ್ದಾರೆ.
ಈ ಕುರಿತು ಮಾತನಾಡಿರುವ ಡಿ ಕೆ ಶಿವಕುಮಾರ್ ಅವರು ಚುನಾವಣೆ ಹಿನ್ನಲೆಯಲ್ಲಿ ದಾಳಿ ಮಾಡಲಾಗಿದೆ, ನನಗೆ ಅಲ್ಲದೇ ಬೇರೆಯವರಿಗೆ ಕೂಡ ಕಿರುಕುಳ ನೀಡಲಾಗುತ್ತಿದೆ ಅಂತ ಹೇಳಿದರು.