Ad imageAd image

ಕೊವಿಡ್​ ಹಗರಣದ ತನಿಖೆಗೆ SIT ರಚನೆ ಮಾಡಲು ಸಂಪುಟ ಅಸ್ತು

ratnakar
ಕೊವಿಡ್​ ಹಗರಣದ ತನಿಖೆಗೆ SIT ರಚನೆ ಮಾಡಲು ಸಂಪುಟ ಅಸ್ತು
WhatsApp Group Join Now
Telegram Group Join Now

ಬೆಂಗಳೂರು: ಈ ಹಿಂದೆ ಬಿಜೆಪಿ ಅಧಿಕಾರದಲ್ಲಿದ್ದಾಗ ನಡೆದಿದೆಯೆನ್ನಲಾದ ಸಾವಿರಾರು ಕೋಟಿ ರೂ. ಕೋವಿಡ್ – 19 ಹಗರಣದ ತನಿಖೆಗಾಗಿ ಈಗಿನ ಕಾಂಗ್ರೆಸ್ ಸರ್ಕಾರ ನೇಮಿಸಿದ್ದ ನ್ಯಾ. ಮೈಕಲ್ ಡಿ ಕುನ್ಹಾ ಆಯೋಗವು ತನ್ನ ಮಧ್ಯಂತರ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದೆ.  ಅದರಲ್ಲಿ 918 ಕೋಟಿ ರೂ. ಭ್ರಷ್ಟಾಚಾರ ನಡೆದಿದೆ ಎಂದು ಉಲ್ಲೇಖಿಸಲಾಗಿದೆ. ಈ ಸಂಬಂಧ ಇಂದು (ನವೆಂಬರ್ 14) ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಿದ್ದು, ಅಂತಿಮವಾಗಿ ಕೊವಿಡ್​ ಹಗರಣದ ತನಿಖೆಗೆ SIT ರಚನೆ ಮಾಡಲು ಸಿದ್ದರಾಮಯ್ಯ ನೇತೃತ್ವದ ಸಂಪುಟ ಸಭೆ ಅಸ್ತು ಎಂದಿದೆ.

ಕೊವಿಡ್​ ಹಗರಣದ ಸಂಬಂಧ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾಪವಾಗುತ್ತಿದ್ದಂತೆಯೇ ಯಡಿಯೂರಪ್ಪ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಸಚಿವರು ಆಗ್ರಹಿಸಿದ್ದಾರೆ ಎಂದು ತಿಳಿದುಬಂದಿದೆ. ಹೀಗಾಗಿ ಪ್ರಕರಣ ದಾಖಲಿಸಿ ತನಿಖೆ ನಡೆಸಲು ಎಸ್ಐಟಿ ಗೆ ವಹಿಸಲು ಕ್ಯಾಬಿನೆಟ್ ತೀರ್ಮಾನಿಸಿದೆ.

ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಸಚಿವ ಎಚ್​ಕೆ ಪಾಟೀಲ್, ಕೊವಿಡ್​ ವೇಳೆ ಕಿಟ್, ಔಷಧಿ ಖರೀದಿ ವೇಳೆ ಅಕ್ರಮ ನಡೆದಿದೆ. ಕೊವಿಡ್ ಹಗರಣ ಸಂಬಂಧ ಹಲವು ದೂರುಗಳು ದಾಖಲಾಗಿದ್ದವು. ಕೊವಿಡ್​ ಹಗರಣದ ತನಿಖೆಗೆ ಎಸ್​ಐಟಿ ರಚನೆ ಮಾಡಲಾಗುವುದು. ವರದಿ ಆಧರಿಸಿ ಎಸ್ಐಟಿ ತನಿಖೆ ಆಗಲಿದೆ . ಅಗತ್ಯ ಬಿದ್ದರೆ FIR ದಾಖಲಾಗುತ್ತೆ, ಚಾರ್ಜ್​ಶೀಟ್ ಕೂಡ ಹಾಕ್ತೇವೆ. ಯಾರ ವಿರುದ್ಧ FIR ದಾಖಲಿಸಬೇಕೆಂದು SIT ನಿರ್ಧರಿಸುತ್ತದೆ ಎಂದು ಸ್ಪಷ್ಟಪಡಿಸಿದರು.

 

 

WhatsApp Group Join Now
Telegram Group Join Now
Share This Article