ಮೈಸೂರು: ರಾಜ್ಯ ಸರ್ಕಾರದ ಬೇಜವಾಬ್ದಾರಿಯಿಂದ ಕಾವೇರಿ ನದಿ ವಿವಾದ ಉದ್ಭವವಾಗಿದೆ. ರಾಜ್ಯದ ನಾಯಕರು ಅವರವರ ಹೊಡೆದಾಟದಲ್ಲಿ ಮುಳುಗಿರಬೇಕು. ಕಾಂಗ್ರೆಸ್ನವರು ತಮಿಳುನಾಡನ್ನು ಓಲೈಸಿಕೊಳ್ಳಲು ಮುಂದಾಗಿರಬೇಕು.
ಸರ್ಕಾರ ಸರಿಯಾಗಿ ಕಾವೇರಿ ಕೊಳ್ಳದ ಅಧ್ಯಯನ ನಡೆಸದೇ ಇರಬಹುದು. ಹೀಗಾಗಿಯೇ ರಾಜ್ಯ ಸರ್ಕಾರ ಪ್ರಾಧಿಕಾರಕ್ಕೆ ಸೂಕ್ತ ಮಾಹಿತಿ ನೀಡಿಲ್ಲ. ಸರ್ಕಾರ ನ್ಯಾಯಾಲಯಕ್ಕೂ ಕೂಡ ಸೂಕ್ತ ಅಂಕಿ ಅಂಶ ನೀಡಿಲ್ಲ. ಇದರ ಬದಲು ಪ್ರಧಾನಿಯನ್ನು ದೂರುವ ಕೆಲಸ ಮಾಡುತ್ತಿದ್ದಾರೆ.
ಮೋದಿ ಕೇವಲ ತಮಿಳುನಾಡು, ಕರ್ನಾಟಕಕ್ಕೆ ಪ್ರಧಾನಿ ಅಲ್ಲ, ಬೇರೆ ರಾಜ್ಯಗಳ ಜಲ ವಿವಾದ ಕೂಡ ಪ್ರಧಾನಿಗಳು ಬಗೆಹರಿಸಬೇಕಿದೆ. ಕೇಂದ್ರ ಸರ್ಕಾರ, ಬಿಜೆಪಿ ರಾಜ್ಯದ ರೈತರು, ಕನ್ನಡ ಸಂಘಗಳ ಜೊತೆಗಿದೆ. ಇದರಲ್ಲಿ ಯಾವುದೇ ಅನುಮಾನ ಬೇಡ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ಸುವರ್ಣ ಸೌಧ ಬೆಳಗಾವಿ: ಮಹಿಳೆಯರು ಮತ್ತು ಮಕ್ಕಳಲ್ಲಿರುವ ರಕ್ತಹೀನತೆ(ಅನೀಮಿಯಾ)ವನ್ನು 2030 ರೊಳಗೆ ಸಂಪೂರ್ಣವಾಗಿ ನಿವಾರಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ವಿಧಾನಪರಿಷತ್ತಿನ ಶೂನ್ಯ ವೇಳೆಯಲ್ಲಿ ಸದಸ್ಯ ನಾಗರಾಜ್...
ಸುವರ್ಣ ಸೌಧ ಬೆಳಗಾವಿ: ರಾಜ್ಯದಲ್ಲಿ ಈಗಾಗಲೇ ಏಳು ಆನೆ ಕಾರ್ಯಪಡೆ ತಂಡಗಳನ್ನು ರಚಿಸಲಾಗಿದ್ದು, ಆನೆ ಹಿಡಿಯಲು ನಿಯೋಜಿಸಿರುವ ಸಿಬ್ಬಂದಿಗಳಿಗೆ ಹೆಚ್ಚಿನ ತರಬೇತಿ ನೀಡಲಾಗುವುದ ಎಂದು ಅರಣ್ಯ ,ಜೈವಿಕ ಮತ್ತು ಪರಿಸರ ಸಚಿವ ಈಶ್ವರ...