ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನದ ಹಿನ್ನೆಲೆ ನಾಳೆ ಬೆಳಗಾವಿಯಲ್ಲಿ ನಡೆಯಬೇಕಿದ್ದ ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ.
ಅತಿ ಹೆಚ್ಚು ಕಾಲ ಭಾರತದ ಪ್ರಧಾನಿಯಾಗಿ ಕಾರ್ಯನಿರ್ವಹಿಸಿದ ಮನಮೋಹನ್ ಸಿಂಗ್ ವಯೋಸಹಜ ಖಾಯಿಲೆಯಿಂದ ಮೃತಪಟ್ಟ ಹಿನ್ನೆಲೆ ನಾಳೆ ಬೆಳಗಾವಿಯಲ್ಲಿ ನಡೆಯಬೇಕಿದ್ದ ಬೆಳಗಾವಿಯ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ ಎಂದು ಉಪಮುಖ್ಯಂಮತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.