ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಂಧನಕ್ಕೊಳಗಾದ ಚೈತ್ರಾ ಕುಂದಾಪುರ ಅವರ ವಿಚಾರಣೆ ಇಂದಿನಿಂದ ಆರಂಭವಾಗಲಿದೆ. ನಿನ್ನೆ ಬಂಧನಕ್ಕೊಳಗಾದ ಅವರನ್ನು ರಾತ್ರಿ ಮಹಿಳಾ ಸಾಂತ್ವನ ಕೇಂದ್ರದಲ್ಲಿ ಇರಿಸಲಾಗಿತ್ತು.
ಸದ್ಯ 10 ದಿನಗಳ ಕಾಲ ಕಸ್ಟಡಿಗೆ ಪಡೆದಿರುವ ಸಿಸಿಬಿ ಪೊಲೀಸರು, ಸಿಸಿಬಿ ಕಚೇರಿಗೆ ಕರೆತಂದು ವಿಚಾರಣೆ ನಡೆಸಲಿದ್ದಾರೆ. ಸಿಸಿಬಿ ಎಸಿಪಿ ರೀನಾ ಸುವರ್ಣ ಅವರಿಂದ ವಿಚಾರಣೆ ನಡೆಯಲಿದೆ. ಬಳಿಕ ಹಣ ಪಡೆದ ಸ್ಥಳಗಳಲ್ಲಿ ಮಹಜರು ಮಾಡಲಿದ್ದಾರೆ.
ಚೈತ್ರಾ ಕುಂದಾಪುರ ಉದ್ಯಮಿ ಗೋವಿಂದ ಬಾಬು ಪೂಜಾರಿ ಮಾದರಿಯಲ್ಲೆ ಹಲವರಿಗೆ ವಂಚನೆ ಮಾಡಿರುವ ಸಾಧ್ಯತೆ ಹಿನ್ನೆಲೆ ಎಲ್ಲಾ ಆಯಾಮದಲ್ಲಿಯೂ ಬಂಧಿತ ಮೋಹನ್ ಕುಮಾರ್ ಅಲಿಯಾಸ್ ಗಗನ್ ಕಡೂರು, ರಮೇಶ್, ಧನರಾಜ್, ಶ್ರೀಕಾಂತ್, ಪ್ರಜ್ವಲ್ ಅವರನ್ನು ವಿಚಾರಣೆ ನಡೆಸಲಾಗುತ್ತದೆ.
ಬೆಳಗಾವಿ : 2023ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಬೆಳಗಾವಿ ಜಿಲ್ಲೆಯ 14 ಗ್ರಾಮ ಪಂಚಾಯತಿಗಳು ಆಯ್ಕೆಯಾಗಿದ್ದು ಜಿಲ್ಲಾ ಪಂಚಾಯತ್ ಕಾರ್ಯಾಲಯ ಈ ಕುರಿತು ಆದೇಶ ನೀಡಿದೆ.
ಖಾನಾಪುರ – ಬೇಕವಾಡ, ಕಿತ್ತೂರು –...
ಬೆಂಗಳೂರು: ಚಂದ್ರಯಾನ-3 ಅಭೂತಪೂರ್ವ ಯಶಸ್ಸಿನ ಬಳಿಕ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಇಂದು ಮತ್ತೊಂದು ಸಾಹಸಕ್ಕೆ ಮುಂದಾಗಿದ್ದು 15 ದಿನಗಳ ಹಿಂದೆ ಚಂದ್ರನಲ್ಲಿ ರಾತ್ರಿಯಾದ ಕಾರಣ ನಿದ್ರೆಗೆ ಜಾರಿಸಿದ್ದ ವಿಕ್ರಮ್ ಲ್ಯಾಂಡರ್ ಮತ್ತು...