ಉಡುಪಿ: ಬಿಜೆಪಿ ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಹಿಂದೂಪರ ಸಂಘಟನೆ ಕಾರ್ಯಕರ್ತೆ ಚೈತ್ರಾ ಕುಂದಾಪುರ ಉದ್ಯಮಿ, ಟಿಕೆಟ್ ಆಕಾಂಕ್ಷಿ ಗೋವಿಂದಬಾಬು ಐದು ಕೋಟಿ ರೂ. ಹಣ ಅಕ್ರಮವಾಗಿ ವರ್ಗಾವಣೆ ಮಾಡಿದ್ದಾರೆ ಎಂದು ಆರೋಪಿಸಿ ಚೈತ್ರಾ ಕುಂದಾಪುರ ಜಾರಿ ನಿರ್ದೇಶನಾಲಯಕ್ಕೆ ಪತ್ರ ಬರೆದಿದ್ದಾರೆ.
“ಐದು ಕೋಟಿ ರೂ. ಹಣದ ಬಗ್ಗೆ ಗೋವಿಂದಬಾಬು ಆಪ್ತನೇ ನನಗೆ ಮಾಹಿತಿ ನೀಡಿದ್ದಾನೆ. ಹಣ ನೀಡಿದ ಬಗ್ಗೆ ನನ್ನ ಜೊತೆಯೂ ಗೋವಿಂದ ಬಾಬು ಚರ್ಚಿಸಿದ್ದಾರೆ. ಚುನಾವಣಾ ಟಿಕೆಟ್ಗಾಗಿ ಹಣ ವರ್ಗಾಯಿಸಿದ್ದಾರೆ. ಮಂಜುನಾಥ್ಗೆ 1 ಕೋಟಿ ರೂ., ಅಭಿಮವ ಹಾಲಶ್ರೀ ಸ್ವಾಮೀಜಿಗೆ 1.5 ಕೋಟಿ ರೂ. ವಿಶ್ವನಾಥ್ ಜೀಗೆ 3 ಕೋಟಿ ರೂ. ಹಣ ನೀಡಿದ್ದಾಗಿ ಗೋವಿಂದಬಾಬು ನನಗೆ ಹೇಳಿದ್ದಾರೆ. ಈ ಸಂಬಂಧ ಪೊಲೀಸರಿಗೆ ದೂರು ನೀಡಿ ಎಂದು ನಾನು, ಗೋವಿಂದಬಾಬುಗೆ ಹೇಳಿದ್ದೆ” ಎಂದು ಚೈತ್ರಾ ಕುಂದಾಪುರ ಜಾರಿ ನಿರ್ದೇಶನಾಲಯಕ್ಕೆ ಪತ್ರ ಬರೆದಿದ್ದಾರೆ.