Ad imageAd image

ಚಾಮುಂಡೇಶ್ವರಿ ದೇವಸ್ಥಾನ ನಮ್ಮ‌ ಆಸ್ತಿ, ಅವಕಾಶ ಕೊಟ್ರೆ ನಾವೇ ನಿರ್ವಹಣೆ ಮಾಡ್ತೇವೆ‌: ಪ್ರಮೋದಾದೇವಿ

ratnakar
ಚಾಮುಂಡೇಶ್ವರಿ ದೇವಸ್ಥಾನ ನಮ್ಮ‌ ಆಸ್ತಿ, ಅವಕಾಶ ಕೊಟ್ರೆ ನಾವೇ ನಿರ್ವಹಣೆ ಮಾಡ್ತೇವೆ‌: ಪ್ರಮೋದಾದೇವಿ
WhatsApp Group Join Now
Telegram Group Join Now

ಮೈಸೂರು: ಚಾಮುಂಡಿ ಬೆಟ್ಟ ಪ್ರಾಧಿಕಾರ ರಚನೆಗೆ ರಾಜಮನೆತನ ಆಕ್ಷೇಪ ವ್ಯಕ್ತಪಡಿಸಿದೆ. ಹೀಗಾಗಿ ರಾಜವಂಶಸ್ಥರು ಕೋರ್ಟ್ ಮೆಟ್ಟಿಲೇರಿದ್ದು, ಪ್ರಾಧಿಕಾರ ರಚನೆಗೆ ತಡೆಯಾಜ್ಞೆ ತಂದಿದ್ದಾರೆ. ಈ ಬಗ್ಗೆ ಇಂದು ಮೈಸೂರು ಅರಮನೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಚಾಮುಂಡೇಶ್ವರಿ ದೇವಸ್ಥಾನ ನಮ್ಮ ಖಾಸಗಿ ಆಸ್ತಿಯ ಪಟ್ಟಿಯಲ್ಲಿದೆ. ಅದರ ಪ್ರಾಧಿಕಾರ ಮಾಡುವುದು ಕಾನೂನುಬದ್ಧವಲ್ಲ. ದೇಗುಲದ ನಿರ್ವಹಣೆ ನಮಗೆ ನೀಡಿದರೆ ನಾವು ಮಾಡಲು ಸಿದ್ಧ ಎಂದು ಹೇಳಿದ್ದಾರೆ.

ಪ್ರಾಧಿಕಾರಕ್ಕೆ ವಿರೋಧವಿದೆ, ಅದಕ್ಕೆ ಕೋರ್ಟ್‌ ಮೊರೆ ಹೋಗಲಾಗಿದೆ. ಪ್ರಾಧಿಕಾರದ ಹೆಸರಲ್ಲಿ ಸರ್ಕಾರ ರೂಲಿಂಗ್ ಮಾಡಲು ಆಗುವುದಿಲ್ಲ. ದೇವಸ್ಥಾನದಲ್ಲಿ ಸಮಸ್ಯೆ ಆದಾಗ ಮಾತ್ರ ಸರ್ಕಾರ ಮಧ್ಯಪ್ರವೇಶಿಸಬಹುದು ಎಂದು ತಿಳಿಸಿದ್ದಾರೆ.

ಖಾಸಗಿ ಪ್ರಾಪರ್ಟಿ ಯಾವುದು ಅಂತಾ ರಾಜ್ಯ ಸರ್ಕಾರಕ್ಕೆ ಗೊತ್ತಿದೆ. 2001ರ ಕೇಸ್ ಪೆಂಡಿಗ್ ಇದೆ, ಇದಕ್ಕೂ ಮೊದಲೇ ಪ್ರಾಧಿಕಾರ ರಚನೆ ಏಕೆ? 2001ರ ಕೇಸ್ ಕ್ಲಿಯರ್ ಆಗಲಿ. 1974ರಲ್ಲಿ ನಿರ್ವಹಣೆ ಮಾಡಲು ಕಷ್ಟ ಅಂತಾ ಪತ್ರ ಬರೆದಿದ್ದು ನಿಜ. ಅಂದು ಬೇರೆ ಬೇರೆ ಕಾರಣ ಇತ್ತು. ಆ ರೀತಿ ಮ್ಯಾನೇಜ್ ಮಾಡಿ ಅಂತಾ ಕೊಟ್ಟಾಗ ನಿರ್ವಹಣೆ ಮಾಡಲಿ. ಆದರೆ ನೀವೇ ಸ್ವಂತ ಮಾಡಿಕೊಳ್ಳಿ ಅಂತಾ ನಾವು ಕೊಟ್ಟಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

2001ರ ಕೇಸ್‌ನ ತೀರ್ಪು ನಮ್ಮ ಪರ ಬಂದರೆ ನಾವೇ ನಿರ್ವಹಿಸುತ್ತೇವೆ. ಪೂರ್ವಜರ ಹಾದಿಯಲ್ಲೇ ಸಾಗುತ್ತಿದ್ದೇವೆ, ಬೇರೆ ಮಾರ್ಗದಲ್ಲಿ ಹೋಗಲ್ಲ. ಚಾಮುಂಡಿಬೆಟ್ಟ ಉಳಿಸಿಕೊಳ್ಳಲು ಹೊರಟಿದ್ದೇವೆ, ಬೆಟ್ಟ ಬೆಟ್ಟದ ರೀತಿ ಇರಲಿ. ವಯನಾಡು, ಕೊಡಗು ರೀತಿ ಆಗದೆ ಇರಲಿ ಎನ್ನುವುದು ನಮ್ಮ ಉದ್ದೇಶ. 1950ರಲ್ಲಿ ಖಾಸಗಿ ಪ್ರಾಪರ್ಟಿ ಲಿಸ್ಟ್ ಮಾಡಿದ್ದರು, ಖರಾಬು ಇರಲಿ ಏನೇ ಇರಲಿ, ಆವಾಗ ಲಿಸ್ಟ್‌ನಲ್ಲಿ ಕೊಟ್ಟಿದ್ದು ಬಿಟ್ಟು ಬೇರೇನೂ ನಾವು ಇಟ್ಟುಕೊಂಡಿಲ್ಲ. ಬೇರೆ ಏನನ್ನೂ ಕೇಳುತಿಲ್ಲ, ಅನೇಕ ಕಾರ್ಖಾನೆಗಳನ್ನು ಬಿಟ್ಟುಕೊಟ್ಟಿದ್ದೇವೆ. ಅದನ್ನು ಕೇಳಿದ್ದೇವಾ? ಸರ್ಕಾರ ಬದಲಾದಾಗ ಪರಿಸ್ಥಿತಿ ಸಹ ಬದಲಾಗುತ್ತಿದೆ. ಪ್ರಾಧಿಕಾರ ಮಾಡಿರುವುದು ಸರಿಯಿಲ್ಲ, ಸರ್ಕಾರದ ಈ ನಡೆ ಸರಿಯಿಲ್ಲ ಎಂದಿದ್ದಾರೆ.

WhatsApp Group Join Now
Telegram Group Join Now
Share This Article