spot_img
spot_img
spot_img
28.1 C
Belagavi
Thursday, September 29, 2022
spot_img

ಹರ್ಷ ಶುಗರ್ಸ್ ಟ್ರೋಪಿಗೆ ಚಾಲನೆ ನೀಡಿದ ಚನ್ನರಾಜ ಹಟ್ಟಿಹೊಳಿ

spot_img

ಬೆಳಗಾವಿ : ಪಠ್ಯ ಚಟುವಟಿಕೆಯಷ್ಟೇ ಕ್ರೀಡಾ ಚಟುವಟಿಕೆಗಳೂ ಮಕ್ಕಳಿಗೆ ಅವಶ್ಯವಾಗಿದ್ದು, ಈ ಹಿನ್ನೆಲೆಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಹಲವಾರು ಯೋಜನೆಗಳನ್ನು ಜಾರಿಗೊಳಿಸಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ, ಹರ್ಷ ಸಕ್ಕರೆ ಕಾರ್ಖಾನೆ ವ್ಯವಸ್ಥಾಪಕ ನಿರ್ದೇಶಕ ಚನ್ನರಾಜ ಹಟ್ಟಿಹೊಳಿ ಹೇಳಿದರು.

ಹಿರೇಬಾಗೇವಾಡಿ ಗ್ರಾಮದಲ್ಲಿ ಸೋಮವಾರ ಹರ್ಷ ಶುಗರ್ಸ್ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ, ಲಕ್ಷ್ಮೀ ತಾಯಿ ಫೌಂಡೇಷನ್ ವತಿಯಿಂದ ಬಹುಮಾನಗಳನ್ನು ಘೋಷಿಸಿ ಅವರು ಮಾತನಾಡುತ್ತಿದ್ದರು.

ಸರ್ವತೋಮುಖ ಬೆಳವಣಿಗೆಗೆ ಮಾನಸಿಕ ಹಾಗೂ ದೈಹಿಕ ಎರಡೂ ಬೆಳವಣಿಗೆ ಅವಶ್ಯಕ. ಆದರೆ ದೈಹಿಕ ಚಟುವಟಿಕೆಗಳು ಇಂದಿನ ಮಕ್ಕಳಲ್ಲಿ, ಯುವ ಜನಾಂಗದಲ್ಲಿ ಕಡಿಮೆಯಾಗಿವೆ. ಹಾಗಾಗಿ ಶಿಕ್ಷಣ ತಜ್ಞರು, ಸಮಾಜದ ಮುಖಂಡರ ಜೊತೆ ಚರ್ಚಿಸಿ ಅನೇಕ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ.

ಯುವಕರು ಇದರಲ್ಲಿ ಕೈ ಜೋಡಿಸುವ ಜೊತೆಗೆ ಸದುಪಯೋಗಪಡಿಸಿಕೊಳ್ಳಬೇಕು ಎಂದು ಅವರು ವಿನಂತಿಸಿದರು.ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಕ್ರೀಡಾಪಟುಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

spot_img

Related News

ಮೋದಿ ಅವರ ನೇತೃತ್ವದಲ್ಲಿ 150 ಸ್ಥಾನಗಳ ಗೆಲುವ ಪಣ : ಯಡಿಯೂರಪ್ಪ 

ಶಿವಮೊಗ್ಗ: ಪ್ರಧಾನಿ ಮೋದಿ ಅವರ ಮಾರ್ಗದರ್ಶನದಲ್ಲಿ ಮುಂಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ 150 ಸ್ಥಾನಗಳನ್ನು ಗೆಲ್ಲುವ ಪಣ ಹೊಂದಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿಯವರ ನೇತೃತ್ವದಲ್ಲಿ ದೇಶ...

ತಾಳ್ಮೆ ಕಳೆದುಕೊಂಡು ಸಿದ್ದರಾಮಯ್ಯ ಮಾತನಾಡುತ್ತಿದ್ದಾರೆ : ಮಾಜಿ ಸಿಎಂ ಯಡಿಯೂರಪ್ಪ 

ಶಿವಮೊಗ್ಗ: ಇತ್ತೀಚೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ತಾಳ್ಮೆ ಕಳೆದುಕೊಂಡು ಹುಚ್ಚುಚ್ಚರಾಗಿ ಮಾತನಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ವಾಗ್ದಾಳಿ ನಡೆಸಿದ್ದಾರೆ. ನಗರದ ತಮ್ಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯಗೆ ತಲೆಕೆಟ್ಟಿದೆ....

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -