spot_img
spot_img
spot_img
18 C
Belagavi
Thursday, September 29, 2022
spot_img

ವಿದ್ಯುತ್ ಅಪಘಾತಕ್ಕೆ ಬಾಲಕನ ದುರ್ಮರಣ: 5 ಲಕ್ಷ ರೂ. ಚೆಕ್ ವಿತರಿಸಿದ ಚನ್ನರಾಜ ಹಟ್ಟಿಹೊಳಿ

spot_img

ವರದಿ : ರತ್ನಾಕರ್ ಗೌಂಡಿ

ಬೆಳಗಾವಿ : ವಿದ್ಯುತ್ ಅಪಘಾತದಲ್ಲಿ ಮೃತನಾಗಿದ್ದ ಬಾಲಕನ ಕುಟುಂಬಕ್ಕೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಶುಕ್ರವಾರ 5 ಲಕ್ಷ ರೂ. ಪರಿಹಾರದ ಚೆಕ್ ವಿತರಿಸಿದರು.ಬೆಳಗಾವಿ ಗ್ರಾಮೀಣ ಕ್ಷೇತ್ರದ ಗೆಜಪತಿ ಗ್ರಾಮದ ದಯಾನಂದ ಬಸಪ್ಪ ತಾರಿಹಾಳ ವಿದ್ಯುತ್ ಅಪಘಾತದಲ್ಲಿ ಮರಣ ಹೊಂದಿದ್ದ. ಈ ಹಿನ್ನೆಲೆಯಲ್ಲಿ ಈತನ ವಾರಸುದಾರರಾದ ಬಸಪ್ಪ ಗೋವಿಂದ ತಾರಿಹಾಳ ಇವರಿಗೆ ಹೆಸ್ಕಾಂ ವತಿಯಿಂದ 5 ಲಕ್ಷ ರೂ,ಗಳ ಪರಿಹಾರದ ಚೆಕ್ ನ್ನು ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಹೆಸ್ಕಾಂ ಅಧಿಕಾರಿಗಳು, ಗ್ರಾಮದ ಜನರು, ಬಸಪ್ಪ ಬಂಡುಗೋಳ, ಚಂದ್ರು ಪಾಟೀಲ, ನಾಗರಾಜ ಬಡಿಗೇರ್, ಪರುಶರಾಮ ಸನದಿ, ವಿಠ್ಠಲ ಕೋಲಕಾರ, ಸಂತೋಷ ಬಂಡುಗೋಳ ಹಾಗೂ ಮುಂತಾದವರು ಉಪಸ್ಥಿತರಿದ್ದರು.

 ಹಾಲು ಕರೆಯುವ ಯಂತ್ರ ವಿತರಣೆ

ಪಶು ಸಂಗೋಪನೆ ಇಲಾಖೆಯ ಅಮೃತ ಯೋಜನೆಯಡಿ ಕುಟ್ಟಲವಾಡಿ ಗ್ರಾಮದ ಮಹಾದೇವಿ ಬಾಳಪ್ಪ ಪೂಜಾರಿ ಇವರಿಗೆ ಹಾಲು ಕರೆಯುವ ಯಂತ್ರವನ್ನು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ವಿತರಿಸಿದರು.ಈ ಸಂದರ್ಭದಲ್ಲಿ ಮುಖ್ಯ ಪಶು ವೈದ್ಯಾಧಿಕಾರಿಯಾದ ಶ್ರೀಕಾಂತ ಗಾಂವೆ,‌ ಶಂಕರಗೌಡ ಪಾಟೀಲ ಉಪಸ್ಥಿತರಿದ್ದರು.

spot_img

Related News

ಡಿ.ಕೆ.ಶಿವಕುಮಾರ್ ಮನೆ, ಕಚೇರಿ ಮೇಲೆ ಸಿಬಿಐ ದಾಳಿ

ಬೆಂಗಳೂರು: ಇಡಿ ಅಧಿಕಾರಿಗಳ ದಾಳಿಯ ಬಳಿಕ ವಿಚಾರಣೆ ಎದುರಿಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಕೇಂದ್ರ ತನಿಖಾ ದಳದ ಅಧಿಕಾರಿಗಳು ಡಿ ಕೆ ಶಿವಕುಮಾರ್...

ಮೂರು ಪಡೆಗಳ ಮುಖ್ಯಸ್ಥರಾಗಿ ಅನಿಲ್ ಚವ್ಹಾಣ್ ನೇಮಕ

ನವದೆಹಲಿ: ನಿವೃತ್ತ ಲೆಫ್ಟಿನೆಂಟ್ ಜನರಲ್ ಅನಿಲ್ ಚವ್ಹಾಣ್ ಅವರನ್ನು ನೂತನ ಸಿಡಿಎಸ್ ಆಗಿ ನೇಮಕ ಮಾಡಲಾಗಿದೆ. ಎರಡನೇ ಸಿಡಿಎಸ್ ಅನಿಲ್ ಚವ್ಹಾಣ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -