ಬೆಳಗಾವಿ : ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆ ರವರು ಆಯೋಜಿಸಲಿರುವ ಆಲ್ ಇಂಡಿಯಾ ಓಪನ್ ಟೆನ್ನಿಸ್ ಬಾಲ್ ಕ್ರಿಕೇಟ್ ಟೋರ್ನಾಮೆಂಟ್‍ನ ಟ್ರೋಪಿಗಳನ್ನು ಇಂದು ನಗರದ ಸರದಾರ ಮೈದಾನದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ರವರು ಅನಾವರಣಗೊಳಿಸಿದರು.
ಈ ಸಂದರ್ಭದಲ್ಲಿ ಸನ್ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಹಾಗೂ ಉನ್ನತ ಶಿಕ್ಷಣ ಸಚಿವರಾದ ಡಾ. ಸಿ. ಎನ್. ಆಶ್ವತ್‍ನಾರಾಯಣ ರವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಶಾಸಕ ಅನಿಲ ಬೆನಕೆರವರು ಕಾರ್ಯಕ್ರಮದ ಉದ್ಘಾಟನೆಗೆ ಆಗಮಿಸಿದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿರವರಿಗೆ, ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಹಾಗೂ ಉನ್ನತ ಶಿಕ್ಷಣ ಸಚಿವರಾದ ಡಾ. ಸಿ. ಎನ್. ಆಶ್ವತ್‍ನಾರಾಯಣ ಅವರಿಗೆ ಹೃದಯಪೂರ್ವಕವಾಗಿ ಧನ್ಯವಾದಗಳನ್ನು ಅರ್ಪಿಸಿ ಗೋವಿನ ಮೂರ್ತಿಗಳನ್ನು ನೀಡಿ ಗೌರವಿಸಿದರು.
ಕಾರ್ಯಕ್ರಮದಲ್ಲಿ ನಗರ ಸೇವಕರು, ಹಲವಾರು ಬಿ.ಜೆ.ಪಿ ಪದಧಿಕಾರಿಗಳು ಮತ್ತು ಕಾರ್ಯಕರ್ತರು ಸೇರಿದಂತೆ ಗಣ್ಯ ಮಾನ್ಯರು ಪಾಲ್ಗೊಂಡಿದ್ದರು.