ಬೆಳಗಾವಿ : ಗಡಿ ವಿವಾದದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸಚಿವವರ ಮೊಂಡಾಟ ಮುಂದುವರೆದಿದ್ದು, ಬೆಳಗಾವಿ ಭೇಟಿ ರದ್ದು ಮಾಡಿಲ್ಲ. ಮುಂದೂಡಿಕೆ ಮಾಡಿದ್ದೇವೆ ಎಂದು ಸಚಿವ ಶಂಭುರಾಜ್ ದೇಸಾಯಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಭೇಟಿ ಸಿದ್ದತೆ ಮಾಡಿಕೊಳ್ಳಲಾಗಿದ್ದು, ಆದರೆ ಅಂಬೇಡ್ಕರ್ ಪರಿನಿರ್ವಾಣ ಹಿನ್ನೆಲೆಯಲ್ಲಿ ಭೇಟಿ ರದ್ದು ಮಾಡಿಲ್ಲ. ಬದಲಾಗಿ ಮುಂದೂಡಿಕೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಸರ್ಕಾರ ರಾಜೀ ಮಾಡಿಕೊಳ್ಳುವ ಮಾತೇ ಇಲ್ಲ. ಶೀಘ್ರವೇ ಬೆಳಗಾವಿಗೆ ಭೇಟಿ ನೀಡುತ್ತೇವೆ ಎಂದು ಹೇಳಿದ್ದಾರೆ.